September 10, 2026
Thursday, September 10, 2026
spot_img

ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ ಹೊಸ ಅಧ್ಯಕ್ಷರ ನೇಮಕ: ದ.ಕ ಜಿಲ್ಲಾಧ್ಯಕ್ಷರಾಗಿ ಪದ್ಮರಾಜ್‌. ಆರ್‌ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಂಬರುವ ರಾಜಕೀಯ ಸವಾಲುಗಳು ಹಾಗೂ ಪಕ್ಷದ ಬಲವರ್ಧನೆಗೆ ಸಜ್ಜಾಗಿರುವ ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿ, ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಸೆ. 9ರಂದು ಈ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ನೇಮಕಾತಿಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ.


ಪಕ್ಷವು ಹಮ್ಮಿಕೊಂಡಿದ್ದ ‘ಸಂಘಟನ ಸೃಜನ ಅಭಿಯಾನ’ದ ಅಡಿಯಲ್ಲಿ ಪ್ರತಿಯೊಂದು ಜಿಲ್ಲೆಗೂ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ತಳಮಟ್ಟದ ಸ್ಥಿತಿಗತಿಗಳನ್ನು ಪರಿಶೀಲಿಸಿ ವರದಿ ನೀಡಿದ್ದರು. ಈ ವರದಿಯ ಆಧಾರದ ಮೇಲೆ ಹಾಗೂ ರಾಜ್ಯದ ಹಿರಿಯ ನಾಯಕರೊಂದಿಗೆ ಸುದೀರ್ಘವಾಗಿ ಚರ್ಚಿಸಿದ ಬಳಿಕ ಅರ್ಹ ಮತ್ತು ಸಕ್ರಿಯ ನಾಯಕರಿಗೆ ಜಿಲ್ಲಾ ಸಾರಥ್ಯವನ್ನು ಹಂಚಿಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:

ಪದ್ಮರಾಜ್‌. ಆರ್‌ ನೂತನ ಅಧ್ಯಕ್ಷರಾಗಿ ನೇಮಕ

ಉಡುಪಿ, ಉತ್ತರ ಕನ್ನಡ, ಬೆಂಗಳೂರು, ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ನಾಯಕರನ್ನು ನೇಮಿಸಲಾಗಿದ್ದು, ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಪದ್ಮರಾಜ್‌. ಆರ್‌ ಅವರು ನೇಮಕ ಮಾಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !