May 23, 2026
Saturday, May 23, 2026
spot_img

19ನೇ ರೋಜ್‌ಗಾರ್ ಮೇಳದಲ್ಲಿ ಹೊಸ ದಾಖಲೆ: 51 ಸಾವಿರಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರು 19ನೇ ರೋಜ್‌ಗಾರ್ ಮೇಳ ಕಾರ್ಯಕ್ರಮದಡಿ ದೇಶದ ವಿವಿಧ ಭಾಗಗಳ ಯುವಕರಿಗೆ 51 ಸಾವಿರಕ್ಕೂ ಹೆಚ್ಚು ಸರ್ಕಾರಿ ಉದ್ಯೋಗ ನೇಮಕಾತಿ ಪತ್ರಗಳನ್ನು ವರ್ಚುವಲ್ ಮೂಲಕ ವಿತರಿಸಿದರು.

ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ನೇಮಕಾತಿ ಪತ್ರಗಳನ್ನು ನೀಡಲಾಗಿದೆ.

ದೇಶದ 47ಕ್ಕೂ ಹೆಚ್ಚು ಕೇಂದ್ರಗಳಲ್ಲಿ ರೋಜ್‌ಗಾರ್ ಮೇಳ ಆಯೋಜಿಸಲಾಗಿದ್ದು, ರೈಲ್ವೆ, ಗೃಹ, ಅಂಚೆ, ಆರೋಗ್ಯ, ಬ್ಯಾಂಕಿಂಗ್ ಹಾಗೂ ಇತರ ಪ್ರಮುಖ ಇಲಾಖೆಗಳ ನೇಮಕಾತಿಗಳು ಇದರಲ್ಲಿ ಸೇರಿವೆ. ಕಳೆದ ಹಲವು ರೋಜ್‌ಗಾರ್ ಮೇಳಗಳ ಮೂಲಕ ಲಕ್ಷಾಂತರ ಯುವಕರಿಗೆ ಸರ್ಕಾರಿ ಉದ್ಯೋಗ ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಇದನ್ನೂ ಓದಿ:

ಯುವಕರಿಗೆ ಜಾಗತಿಕ ಅವಕಾಶಗಳ ಭರವಸೆ

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತವು ಜಾಗತಿಕ ಮಟ್ಟದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಮತ್ತು ತಂತ್ರಜ್ಞಾನ ಶಕ್ತಿಯಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದರು. ಇತ್ತೀಚಿನ ವಿದೇಶ ಪ್ರವಾಸಗಳ ವೇಳೆ ಹಲವು ರಾಷ್ಟ್ರಗಳು ಭಾರತದ ಯುವಶಕ್ತಿಯ ಮೇಲೆ ವಿಶ್ವಾಸ ವ್ಯಕ್ತಪಡಿಸಿರುವುದಾಗಿ ಅವರು ಹೇಳಿದರು.

ಭಾರತದ ಅಂತಾರಾಷ್ಟ್ರೀಯ ಸಹಕಾರ ಮತ್ತು ಜಾಗತಿಕ ಒಪ್ಪಂದಗಳು ಯುವಕರಿಗೆ ಹೊಸ ಉದ್ಯೋಗ ಹಾಗೂ ಕೌಶಲ್ಯ ಅಭಿವೃದ್ಧಿ ಅವಕಾಶಗಳನ್ನು ಸೃಷ್ಟಿಸುವ ಗುರಿ ಹೊಂದಿವೆ ಎಂದು ಪ್ರಧಾನಿ ತಿಳಿಸಿದರು. ‘ವಿಕಸಿತ ಭಾರತ’ ನಿರ್ಮಾಣದಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !