ರಾಜ್ಯದಲ್ಲಿ ಇಂದು 163 ಜನರಿಗೆ ಕೊರೋನಾ , 162 ಮಂದಿ ಗುಣಮುಖ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು 163 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 162 ಮಂದಿ ಗುಣಮುಖರಾಗಿದ್ದಾರೆ.

ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಕಳೆದ 24 ಗಂಟೆಯಲ್ಲಿ 6396 ಜನರನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ.

ಬೆಂಗಳೂರಲ್ಲಿ 50, ಬೆಂಗಳೂರು ಗ್ರಾಮಾಂತರ 08, ಹಾಸನ 10, ಮಂಡ್ಯ 8, ಮೈಸೂರು 27 ಸೇರಿದಂತೆ 163 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದು ತಿಳಿಸಿದೆ.
ಹೀಗಾಗಿ ರಾಜ್ಯದಲ್ಲಿ ಸದ್ಯ 994 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!