ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಇಂಧನ ವಲಯಕ್ಕೆ ಹೊಸ ಚೈತನ್ಯ ನೀಡುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್‌ನಲ್ಲಿ ಮಹತ್ವದ ಘೋಷಣೆ ಮಾಡಲಾಗಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ವಿವಿಧ ಉಪಕೇಂದ್ರಗಳ ಆವರಣದಲ್ಲಿ ಸೌರ ವಿದ್ಯುತ್ ಸ್ಥಾವರಗಳನ್ನು ನಿರ್ಮಿಸಲು ಸರ್ಕಾರ ನಿರ್ಧರಿಸಿದೆ.
ಈ ಯೋಜನೆಯನ್ನು ಅಂದಾಜು 10,500 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ.
ಒಟ್ಟು 300 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ.
ಪರಿಸರ ಸ್ನೇಹಿ ಇಂಧನಕ್ಕೆ ಆದ್ಯತೆ ನೀಡುವುದು ಮತ್ತು ವಿದ್ಯುತ್ ಕೊರತೆಯನ್ನು ನೀಗಿಸಲು ಉಪಕೇಂದ್ರಗಳಲ್ಲಿ ಲಭ್ಯವಿರುವ ಜಾಗವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಈ ಯೋಜನೆಯು ಜಾರಿಗೆ ಬರುವುದರಿಂದ ರಾಜ್ಯದ ವಿದ್ಯುತ್ ಜಾಲಕ್ಕೆ ಹೆಚ್ಚಿನ ಸೌರಶಕ್ತಿ ಸೇರ್ಪಡೆಯಾಗಲಿದ್ದು, ಇಂಧನ ಸ್ವಾವಲಂಬನೆಯತ್ತ ಕರ್ನಾಟಕ ಮತ್ತೊಂದು ಹೆಜ್ಜೆ ಇಡಲಿದೆ.



