Wednesday, September 27, 2023

Latest Posts

ಏಕದಿನ ವಿಶ್ವಕಪ್ ನ ಹೊಸ ವೇಳಾಪಟ್ಟಿ ಬಿಡುಗಡೆ: ಇಂಡಿಯಾ-ಪಾಕ್ ಮ್ಯಾಚ್ ಯಾವಾಗ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಏಕದಿನ ವಿಶ್ವಕಪ್ ( ICC World Cup 2023) ವೇಳಾಪಟ್ಟಿಯ ಗೊಂದಲಕ್ಕೆ ಅಂತಿಮವಾಗಿ ತೆರೆಬಿದ್ದಿದೆ. ಈ ಹಿಂದೆ ಪ್ರಕಟಿಸಿದ್ದ ವಿಶ್ವಕಪ್ ವೇಳಾಪಟ್ಟಿಯಲ್ಲಿ ಬದಲಾವಣೆ ತರಲು ಐಸಿಸಿ (ICC) ಹಾಗೂ ಬಿಸಿಸಿಐ (BCCI) ಮುಂದಾಗಿದ್ದವು. ಇದೀಗ 2023ರ ಏಕದಿನ ವಿಶ್ವಕಪ್​ನ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆಯಾಗಿದ್ದು ಕೆಲವು ಪ್ರಮುಖ ಪಂದ್ಯಗಳು ನಡೆಯುವ ದಿನಾಂಕದಲ್ಲಿ ಬದಲಾವಣೆಯಾಗಿದೆ.

ಇದೀಗ ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಹೈವೋಲ್ಟೇಜ್ ಕದನ ಅಕ್ಟೋಬರ್ 14 ರಂದು ನಡೆಯಲಿದೆ. ಭಾರತ-ಪಾಕಿಸ್ತಾನ ಮಾತ್ರವಲ್ಲದೆ ಒಟ್ಟು 9 ಪಂದ್ಯಗಳ ದಿನಾಂಕ ಬದಲಾಗಿದೆ.

ವಾಸ್ತವವಾಗಿ ಈ ಹಿಂದೆ ನಿಗದಿಯಾಗಿದ್ದ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಭದ್ರತಾ ಸಮಸ್ಯೆ ಎದುರಾಗಿತ್ತು. ಏಕೆಂದರೆ ಪಂದ್ಯ ನಡೆಯುವ ದಿನ ಅಂದರೆ ಅಕ್ಟೋಬರ್ 15 ರಂದು ಭಾರತದಲ್ಲಿ ನವರಾತ್ರಿ ಆರಂಭವಾಗುತ್ತದೆ. ಅದರಲ್ಲೂ ನವರಾತ್ರಿಯ ಮೊದಲ ದಿನವನ್ನು ಗುಜರಾತ್​ನಲ್ಲಿ ರಾತ್ರಿ ಇಡೀ ಸಂಭ್ರಮದಿಂದ ಆಚರಿಸಲಾಗುತ್ತದೆ. ಹೀಗಾಗಿ ಅದೇ ದಿನ ಭಾರತ ಪಾಕ್ ಪಂದ್ಯ ನಡೆದರೆ, ಭದ್ರತಾ ಸಮಸ್ಯೆ ಎದುರಾಗಲಿದೆ ಎಂದು ಭದ್ರತಾ ಏಜೆನ್ಸಿಗಳು ಬಿಸಿಸಿಐಗೆ ಎಚ್ಚರಿಕೆ ನೀಡಿದ್ದವು. ಈ ವಿಚಾರವಾಗಿ ಸಭೆ ನಡೆಸಿದ್ದ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ, ಭಾರತ-ಪಾಕಿಸ್ತಾನ ಪಂದ್ಯ ಸೇರಿದಂತೆ ಕೆಲವು ಕ್ರಿಕೆಟ್ ಮಂಡಳಿಗಳು ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಬೇಕೆಂದು ಐಸಿಸಿಗೆ ಮನವಿ ಸಲ್ಲಿಸಿವೆ. ಹೀಗಾಗಿ ಪರಿಷ್ಕೃತ ವಿಶ್ವಕಪ್ ವೇಳಾಪಟ್ಟಿಯನ್ನು ಇಷ್ಟರಲ್ಲೇ ಬಿಡುಗಡೆ ಮಾಡಲಾಗುತ್ತದೆ ಎಂದಿದ್ದರು.

ಹೊಸ ವೇಳಾಪಟ್ಟಿಯ ಪ್ರಕಾರ, ಭಾರತ ತಂಡವು ಅಕ್ಟೋಬರ್ 15 ರ ಬದಲಿಗೆ ಅಕ್ಟೋಬರ್ 14 ರಂದು ಪಾಕಿಸ್ತಾನ ವಿರುದ್ಧ ಪಂದ್ಯವನ್ನು ಆಡಲಿದೆ. ಹಾಗೆಯೇ ನವೆಂಬರ್ 11 ರಂದು ನಡೆಯಬೇಕಿದ್ದ ನೆದರ್ಲೆಂಡ್ಸ್ ವಿರುದ್ಧದ ಪಂದ್ಯ ಇದೀಗ ಒಂದು ದಿನದ ಬಳಿಕ ಅಂದರೆ, ನವೆಂಬರ್ 12 ರಂದು ನಡೆಯಲ್ಲಿದೆ.

ಪರಿಷ್ಕೃತ ವೇಳಾಪಟ್ಟಿ

ಅಕ್ಟೋಬರ್ 10: ಇಂಗ್ಲೆಂಡ್ ವಿರುದ್ಧ ಬಾಂಗ್ಲಾದೇಶ
ಅಕ್ಟೋಬರ್ 10: ಪಾಕಿಸ್ತಾನ ವಿರುದ್ಧ ಶ್ರೀಲಂಕಾ
ಅಕ್ಟೋಬರ್ 12: ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ
ಅಕ್ಟೋಬರ್ 13: ನ್ಯೂಜಿಲೆಂಡ್ ವಿರುದ್ಧ ಬಾಂಗ್ಲಾದೇಶ
ಅಕ್ಟೋಬರ್ 14: ಭಾರತ-ಪಾಕಿಸ್ತಾನ
ಅಕ್ಟೋಬರ್ 15: ಇಂಗ್ಲೆಂಡ್ ವಿರುದ್ಧ ಅಫ್ಘಾನಿಸ್ತಾನ
ನವೆಂಬರ್ 11: ಆಸ್ಟ್ರೇಲಿಯಾ ವಿರುದ್ಧ ಬಾಂಗ್ಲಾದೇಶ
ನವೆಂಬರ್ 11: ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನ
ನವೆಂಬರ್ 12: ಭಾರತ-ನೆದರ್ಲ್ಯಾಂಡ್ಸ್

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!