ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದು, ಹೊಸದಾಗಿ 15,000 ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಹೊಸದಾಗಿ 15,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದರು.
ಕೋರ್ಟ್ ಅನುಮತಿ ಮೇರೆಗೆ ಈಗಾಗಲೇ 15000 ಶಿಕ್ಷಕರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ಶೀಘ್ರ ಅದು ಅನುಷ್ಠಾನವಾಗಲಿದೆ ಎಂದು ಹೇಳುವ ಮೂಲಕ ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದಾರೆ. ಇನ್ನೂ, ಶಾಲೆಯ ಮೂಲಭೂತ ಸೌಕರ್ಯ ಹಾಗೂ ಶಿಕ್ಷಕರ ಕೊರತೆ ಸೇರಿ ಶಾಲೆಗಳ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು.