spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದಕ್ಷಿಣ ಆಫ್ರಿಕಾದಲ್ಲಿ ಹೊಸ ಕೊರೋನಾ ರೂಪಾಂತರಿ ಪತ್ತೆ: ಭಾರತಕ್ಕೆ ಬರುವವರ ಮೇಲೆ ನಿಗಾ ಇರಿಸಲು ರಾಜ್ಯಗಳಿಗೆ ಕೇಂದ್ರ ಸೂಚನೆ

- Advertisement -Nitte

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದಕ್ಷಿಣ ಆಫ್ರಿಕಾದಲ್ಲಿ ಹೊಸ ಕೊರೋನಾ ರೂಪಾಂತರಿ ಪತ್ತೆಯಾಗಿದೆ. ಆಫ್ರಿಕಾ ಮತ್ತು ಹಾಂಗ್‌ಕಾಂಗ್‌ನಿಂದ ಭಾರತಕ್ಕೆ ಬರುವವರ ಮೇಲೆ ನಿಗಾ ಇರಿಸಿ ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಎಚ್ಚರಿಸಿದೆ.

ದಕ್ಷಿಣ ಆಫ್ರಿಕಾದಲ್ಲಿ ಕೊರೋನಾ ವೈರಸ್‌ ಬಿ.1.1.529 ರೂಪಾಂತರಿ ಪತ್ತೆಯಾಗಿದ್ದು, ಆರೋಗ್ಯ ಸಚಿವಾಲಯ ಈ ತಳಿಯ ಬಗ್ಗೆ ಆತಂಕ ವ್ಯಕ್ತಪಡಿಸಿದೆ.  ಈ ಹಿನ್ನೆಲೆ ಕೇಂದ್ರ ಆರೋಗ್ಯ ಕಾಯದರ್ಶಿ ರಾಜೇಶ್‌ ಭೂಷಣ್‌ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದು ಎಚ್ಚರಿಸಿದ್ದಾರೆ.
ಈ ರೂಪಾಂತರವು ಗಣನೀಯವಾಗಿ ಹರಡುವ ಸಾಮರ್ಥ್ಯ ಹೊಂದಿದೆ. ಹಾಂಗ್‌ಕಾಂಗ್‌ ಮತ್ತು ಆಫ್ರಿಕಾದಿಂದ ಬರುವವರ ಬಗ್ಗೆ ನಿಗಾ ವಹಿಸಬೇಕಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚೆಗೆಷ್ಟೇ ವೀಸಾ ನಿರ್ಬಂಧದಲ್ಲಿ ಸಡಿಲಿಕೆ ಮಾಡಲಾಗಿದೆ. ಹಾಗಾಗಿ ಈ ರೂಪಾಂತರಿ ದೇಶ ಪ್ರವೇಶಿಸುವ ಸಾಧ್ಯತೆ ಹೆಚ್ಚಿದೆ. ಜೊತೆಗೆ ಒಂದು ಬಾರಿ ಈ ರೂಪಾಂತರಿ ಮಾನವ ದೇಹ ಹೊಕ್ಕಿದರೆ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ. ದೀರ್ಘಕಾಲದ ಸೋಂಕಿನ ಸಮಯದಲ್ಲಿ ಸೋಂಕು ಬೆಳವಣಿಗೆಯಾಗುವ ಸಾಧ್ಯತೆ ಇದೆ. ಇನ್ನೂ ಸ್ವಲ್ಪ ಸಮಯ ಈ ಸೋಂಕನ್ನು ಸೂಕ್ಷ್ಮವಾಗಿ ಅವಲೋಕಿಸುವ ಅವಶ್ಯವಿದೆ  ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.  ದಕ್ಷಿಣ ಆಫ್ರಿಕಾದಲ್ಲಿ ಈಗಾಗಲೇ 22 ಪ್ರಕರಣಗಳು ಪತ್ತೆಯಾಗಿದ್ದು, ಆತಂಕ ಹೆಚ್ಚಾಗಿದೆ.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss