Wednesday, January 7, 2026

ಬಳ್ಳಾರಿ ಬ್ಯಾನರ್ ಗಲಭೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಹೊಡೆದಾಟ ಶುರುವಾಗಿದ್ದು ಹೇಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ಬ್ಯಾನರ್ ಸಂಬಂಧಿತ ಗಲಾಟೆ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ಘಟನೆ ಆರಂಭದಕ್ಕೆ ಸಂಬಂಧಿಸಿದ ಕೆಲವು ದೃಶ್ಯಗಳು ಸಾರ್ವಜನಿಕವಾಗಿದ್ದು, ಈ ದೃಶ್ಯಗಳನ್ನು ಕಾಂಗ್ರೆಸ್ ಮುಖಂಡರು ಬಿಡುಗಡೆ ಮಾಡಿದ್ದು, ಗಲಾಟೆಗೆ ಜನಾರ್ದನ ರೆಡ್ಡಿ ಬೆಂಬಲಿಗರೇ ಕಾರಣ ಎಂದು ಆರೋಪಿಸಿದ್ದಾರೆ.

ಲಭ್ಯವಾದ ದೃಶ್ಯಗಳ ಪ್ರಕಾರ, ಶಾಸಕ ಭರತ್ ರೆಡ್ಡಿ ಬೆಂಬಲಿಗರು ಜನಾರ್ದನ ರೆಡ್ಡಿ ನಿವಾಸದ ಎದುರು ಬ್ಯಾನರ್ ಅಳವಡಿಸಲು ಮುಂದಾದಾಗ ಪರಿಸ್ಥಿತಿ ಉದ್ವಿಗ್ನಗೊಂಡಿತು. ಈ ವೇಳೆ ಕೆಲವು ಬಿಜೆಪಿ ಕಾರ್ಯಕರ್ತರು ಬ್ಯಾನರ್‌ಗಳನ್ನು ಕಿತ್ತು ಹಾಕಿದ್ದು, ಇದನ್ನು ಪ್ರಶ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಬಳಿಕ ಮತ್ತೆ ಬ್ಯಾನರ್ ಅಳವಡಿಸಲು ಯತ್ನಿಸಿದಾಗ ಎರಡೂ ಗುಂಪುಗಳ ನಡುವೆ ತೀವ್ರ ವಾಗ್ವಾದ ಉಂಟಾಗಿ ಗಲಾಟೆ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಇದನ್ನೂ ಓದಿ: FOOD | ನಾರ್ತ್ ಇಂಡಿಯನ್ ಸ್ಟೈಲ್ ಕಡಿ ರೆಸಿಪಿ ಒಮ್ಮೆ ಟ್ರೈ ಮಾಡಿ! ಸೂಪರ್ ಟೇಸ್ಟ್

ಘಟನೆಯ ಸಮಯದಲ್ಲಿ ಭರತ್ ರೆಡ್ಡಿ ಆಪ್ತನ ಖಾಸಗಿ ಗನ್‌ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾಗಿ ಆರೋಪಿಸಲಾಗಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಗುಂಡಿಗೆ ಬಲಿಯಾಗಿದ್ದಾನೆ. ಅಲ್ಲದೆ, ಗಲಾಟೆ ವೇಳೆ ಖಾರಿದ ಪುಡಿ ಎರಚಿದ ಹಾಗೂ ಗಾಯಗೊಂಡವರು ನೀರು ಸುರಿಸಿಕೊಂಡ ದೃಶ್ಯಗಳೂ ಹೊರಬಂದಿವೆ. ಈ ಎಲ್ಲಾ ಅಂಶಗಳನ್ನೊಳಗೊಂಡಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

error: Content is protected !!