September 9, 2026
Wednesday, September 9, 2026
spot_img

ಅಂಗನವಾಡಿ ಕಾರ್ಯಕರ್ತೆಯರಿಗೆ ಹೊಸ ಯುನಿಫಾರ್ಮ್‌, ಎಲ್ಲಾ ಜಿಲ್ಲೆಗಳಲ್ಲಿ ಅಕ್ಕ ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಎಲ್ಲಾ ಜಿಲ್ಲೆಗಳಲ್ಲಿ ‘ಅಕ್ಕ ಪಡೆ’ ಯೋಜನೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಇನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಸಮವಸ್ತ್ರ ವಿತರಿಸಲಾಗುವದು, ಧನಶ್ರೀ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹ ಧನ ಹೆಚ್ಚಳ ಮಾಡಲಾಗುವುದು ಎಂದಿದ್ದಾರೆ.

ಪ್ರೋತ್ಸಾಹ ಧನ 30 ಸಾವಿರ ರೂಪಾಯಿಯಿಂದ 45 ಸಾವಿರ ರೂ.ಗೆ ಹೆಚ್ಚಳ ಮಾಡಲಾಗುವುದು, 18 ವರ್ಷದ ಮಕ್ಕಳಿಗಾಗಿ ಮಾದಕ ವ್ಯಸನಿ ಪುನರ್ವಸತಿ ಕೇಂದ್ರ ನಿರ್ಮಿಸಲಾಗುವುದು ಎಂದಿದ್ದಾರೆ.

ಅಷ್ಟೇ ಅಲ್ಲದೆ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ 200 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !