ಹೊಸ ವರ್ಷಾಚರಣೆ: ಎಂಜಿ, ಬ್ರಿಗೇಡ್​ ರಸ್ತೆಯಲ್ಲಿ ಸಂಭ್ರಮಾಚರಣೆಗಿಲ್ಲ ನಿರ್ಬಂಧ!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಕ್ರಿಸ್‌ಮಸ್‌ ಮತ್ತು ಹೊಸ ವರ್ಷದ ತಯಾರಿ ಸದ್ದಿಲ್ಲದೇ ಕಾವೇರುತ್ತಿದೆ. ಅತ್ತ ಪೊಲೀಸರು, ಪಾಲಿಕೆ ಕೂಡ ಅಲರ್ಟ್ ಆಗಿದೆ. ಕ್ರಿಸ್‌ಮಸ್‌ ಮತ್ತು ನ್ಯೂ ಇಯರ್ ಸೆಲೆಬ್ರೇಷನ್​ಗೆ ಕೆಲವೊಂದು ರೂಲ್ಸ್ ಗಳನ್ನ ಜಾರಿಗೆ ತರಲು ಸಜ್ಜಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಎಲ್ಲಾ ರೀತಿಯ ಭದ್ರತೆಗೆ ಕ್ರಮಕೈಗೊಳ್ಳುವಂತೆ ಸೂಚಿಸಿರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು. ಹೊಸ ವರ್ಷಾಚರಣೆ ದಿನ ಯಾವುದೇ ಅಹಿತಕರ ಘಟನೆ ಆಗಬಾರದು. ಬಂದೋಬಸ್ತ್​ ಕ್ರಮಗಳನ್ನು ಕೈಗೊಳ್ಳುವಂತೆ ಸಭೆ ನಡೆಸಲಾಗಿದೆ. ಮಹಿಳಾ ಸುರಕ್ಷತೆಗೆ ಹೆಚ್ಚು ಒತ್ತು ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರಲ್ಲಿ 7 ಲಕ್ಷ ಜನ ಮಿಡ್​ನೈಟ್​ ಸೆಲೆಬ್ರೆಷನ್​ನಲ್ಲಿ ಭಾಗಿಯಾಗುತ್ತಾರೆ. ಏನೇ ಅಹಿತಕರ ಘಟನೆ ನಡೆದ್ರೂ ಏರಿಯಾ ಡಿಸಿಪಿ ಹೊಣೆಯಾಗಲಿದ್ದಾರೆ. ಟ್ರಾಫಿಕ್ ನಿರ್ವಹಣೆ ಸಮಸ್ಯೆ ಆಗದಂತೆ ಮೆಟ್ರೋ, ಆಟೋಗಳು, ಬಸ್​ಗಳ ಓಡಾಟ ಸೇರಿದಂತೆ ಹಲವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಎಂ.ಜಿ.ರಸ್ತೆ, ಬ್ರಿಗೇಡ್​ ರಸ್ತೆಯಲ್ಲಿ ಸಂಭ್ರಮಾಚರಣೆಗೆ ನಿರ್ಬಂಧ ಇಲ್ಲ ಎಂದಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!