ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸ ವರ್ಷ 2025ಕ್ಕೆ ಭರ್ಜರಿ ಸ್ವಾಗತ ಸಿಕ್ಕಿದೆ. ನ್ಯೂ ಇಯರ್ ಸಂಭ್ರಮಾಚರಣೆಗಾಗಿ ನಂದಿಗಿರಿಧಾಮಕ್ಕೆ ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ನಂದಿ ಬೆಟ್ಟಕ್ಕೆ ದಂಡು ದಂಡಾಗಿ ಪ್ರವಾಸಿಗರು ಆಗಮಿಸಿದರು. ಪರಿಣಾಮ ನಂದಿ ಬೆಟ್ಟದ ಕ್ರಾಸ್‌ನಲ್ಲೇ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಕಾರು ಹಾಗೂ ಬೈಕ್‌ಗಳಲ್ಲಿ ನಂದಿ ಬೆಟ್ಟಕ್ಕೆ ಪ್ರವಾಸಿಗರು ಲಗ್ಗೆ ಇಟ್ಟಿದ್ದು, ಬೆಳಗ್ಗೆ 7 ಗಂಟೆಗೆ ಚೆಕ್‌ಪೋಸ್ಟ್ ತೆರೆದ ತಕ್ಷಣ ತರಾತುರಿಯಲ್ಲಿ ಜನ ಆಗಮಿಸಿದ್ದಾರೆ.
ಎಲ್ಲೆಲ್ಲೂ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಬೆಂಗಳೂರಿನಲ್ಲಿ ಮಧ್ಯರಾತ್ರಿ 12 ಗಂಟೆಗೆ ಗ್ರ್ಯಾಂಡ್ ವೆಲ್‌ಕಮ್ ಕೋರಲಾಯಿತು. ಎಂಜಿ ರಸ್ತೆ, ಚರ್ಚ್ ಸ್ಟ್ರೀಟ್, ವೈಟ್‌ಫೀಲ್ಡ್ ಮೊದಲಾದ ಪ್ರಮುಖ ಭಾಗಗಳಲ್ಲಿ ಕಿಕ್ಕಿರಿದು ಯುವಜನತೆ ಸೇರಿದ್ದರು.