ಹೊಸ ವರ್ಷಾಚರಣೆ: ಬೆಳಗಾವಿ ಜಿಲ್ಲೆಯ ಪ್ರಮುಖ ತಾಣಗಳಲ್ಲಿ ಪೊಲೀಸರು ಬಿಗಿ ಬಂದೋಬಸ್ತ್

ಹೊಸದಿಗಂತ ವರದಿ,ಬೆಳಗಾವಿ:

ಹೊಸ ವರ್ಷಾಚರಣೆಯ ಸಂಭ್ರಮಾಚರಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಪ್ರಮುಖ ತಾಣಗಳಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದ್ದಾರೆ.
ಹೊಸ ವರ್ಷ ಸಂಭ್ರಮಾಚರಣೆಯಲ್ಲಿ ಯುವ ಜನಾಂಗ ಕುಣಿದು ಕುಪ್ಪಳಿಸುತ್ತಾರೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಪೊಲೀಸ ಇಲಾಖೆ
ಶನಿವಾರ ಮುಂಜಾನೆಯಿಂದಲೇ ಜಿಲ್ಲೆಯ ಪ್ರಮುಖ ತಾಣಗಳು, ಜಲಪಾತಗಳು, ನದಿ ತೀರಗಳು ಮತ್ತು ಫಾಲ್ಸ್ ಗಳ ಸುತ್ತ ಮುತ್ತ ಹದ್ದಿನ ಕಣ್ಣಿಟ್ಟಿದ್ದಾರೆ.
ಹೊಸ ವರ್ಷಾಚರಣೆಗೆ ಜನ ಹೆಚ್ಚಾಗಿ ಸೇರುವ ತಾಣಗಳಲ್ಲಿ ಪೊಲೀಸ್ ಕಾವಲು ಹಾಕಲಾಗಿದೆ. ಗೋಕಾಕ ಫಾಲ್ಸ್, ಗೊಡಚಿನಮಕ್ಕಿ ಫಾಲ್ಸ್, ಖಾನಾಪುರದ ವಜ್ರ ಫಾಲ್ಸ್ ಗಳಿಗೆ ತೆರಳುವ ಮಾರ್ಗಗಳಲ್ಲಿ ಅರಣ್ಯ ಇಲಾಖೆಯ ಸಹಕಾರದೊಂದಿಗೆ ನಾಕಾ ಬಂದಿ ಮಾಡಲಾಗಿದ್ದು,
ಈ ಮಾರ್ಗದಲ್ಲಿ ತೆರಳುವ ಪ್ರತಿಯೊಂದು ವಾಹನವನ್ನು ತಪಾಸಣೆ ಒಳಪಡಿಸಲಾಗುತ್ತದೆ.
ತುರ್ತು ಪರಿಸ್ಥಿತಿ ನಿಭಾಯಿಸಲು ಪೊಲೀಸ್ ಇಲಾಖೆಯ ಜೊತೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಸಹ ಕೈ ಜೋಡಿಸಿದ್ದಾರೆ.
ಹೊಸ ವರ್ಷವನ್ನು ಎಲ್ಲರೂ ಸಂಭ್ರಮದಿಂದ ಬರಮಾಡಿಕೊಳ್ಳೋಣ, ಆದರೆ ಯಾವುದೇ ರೀತಿಯ ಅವಘಡಕ್ಕೆ ಆಸ್ಪದವಾಗಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಡಾ. ಸಂಜೀವ್ ಪಾಟೀಲ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!