ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಂಡಿರುವ ಕಾರಣ ಜನವರಿ 1 ರಿಂದ ಮಾರ್ಚ್ 15 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿ ಕೆಲವು ದಿನಗಳ ಹಿಂದೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು.
ಆದರೆ, ಇದೀಗ ಹೊಸ ವರ್ಷಾಚರಣೆ ಪ್ರಯುಕ್ತ ಜಿಲ್ಲಾಡಳಿತವು ಪ್ರವಾಸಿಗರಿಗೆ ಸಿಹಿ ಸುದ್ದಿ ನೀಡಿದೆ. ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ದ್ವಾರವನ್ನು ಹೊರತುಪಡಿಸಿ ಉಳಿದೆಲ್ಲ ಪರ್ಯಾಯ ಸ್ಥಳಗಳಿಂದ ಪ್ರವಾಸಿಗರಿಗೆ ಜೋಗ ಜಲಪಾತ ವೀಕ್ಷಿಸಲು ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ.
ಪ್ರವಾಸಿಗರು ವ್ಯೂ ಪಾಯಿಂಟ್, ಯಾತ್ರಿ ನಿವಾಸ, ರಾಣಿ ಫಾಲ್ಸ್, ಮುಂಬೈ ಬಂಗಲೆ ಮೊದಲಾದೆಡೆಯಿಂದ ಜಲಪಾತವನ್ನು ವೀಕ್ಷಿಸಬಹುದು ಎಂದು ಜಿಲ್ಲಾಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರತಿ ವರ್ಷ ಡಿಸೆಂಬರ್ ಕೊನೆಯ ವಾರದಲ್ಲಿ ಜೋಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿತ್ತು. ಆದರೆ, ಈ ವರ್ಷ ಪ್ರವೇಶ ನಿಷೇಧಿಸುವ ಮುನ್ನವೇ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿತ್ತು. ಜೋಗ ವೀಕ್ಷಣೆಯ ಸ್ಥಳಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದ್ದು, ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎನ್ನಲಾಗಿದೆ.