ಸಿಲಿಕಾನ್ ಸಿಟಿಯಲ್ಲಿ ‘ಹೊಸವರ್ಷ’: ಹೇಗಿದೆ ಸಂಚಾರ ವ್ಯವಸ್ಥೆ? ಎಲ್ಲೆಲ್ಲಿದೆ ಸಂಚಾರ ನಿಷೇಧ?

ಹೊಸದಿಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಧಾನಿ ಬೆಂಗಳೂರು ಹೊಸವರ್ಷಾಚರಣೆ ಸಂಭ್ರಮ ಹಿನ್ನೆಯಲ್ಲಿ ರಸ್ತೆ ಸಂಚಾರದಲ್ಲಿ ಕೆಲವು ಮಾರ್ಪಾಡು ಮಾಡಲಾಗಿದೆ.
ಹೇಗಿದೆ ಸಂಚಾರ ವ್ಯವಸ್ಥೆ? ಇಲ್ಲಿದೆ ಓದಿ…

ಎಂ.ಜಿ. ರಸ್ತೆ ಅನಿಲ್ ಕುಂಬ್ಳೆ ವೃತ್ತದಿಂದ ಮೆಯೋ ಹಾಲ್ ಜಂಕ್ಷನ್ ವರೆಗೆ, ಬ್ರಿಗೇಡ್ ರಸ್ತೆಯಲ್ಲಿ, ಕಾವೇರಿ ಎಂಪೋರಿಯಂ ಜಂಕ್ಷನ್ ನಿಂದ ಅಪೇರಾ ಜಂಕ್ಷನ್‌ವರೆಗೆ, ಚರ್ಚ್ ಸ್ಟ್ರೀಟ್ರಲ್ಲಿ, ಬ್ರಿಗೇಡ್ ರಸ್ತೆ ಜಂಕ್ಷನ್ ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್ ವರೆಗೆ, ರೆಸ್ಟ್ ಹೌಸ್ ರಸ್ತೆಯಲ್ಲಿ ಮ್ಯೂಸಿಯಂ ರಸ್ತೆ ಜಂಕ್ಷನ್ ನಿಂದ ಬ್ರಿಗೇಡ್ ರಸ್ತೆ ಜಂಕ್ಷನ್ ವರೆಗೆ, ರೆಸಿಡೆನ್ಸಿ ಕ್ರಾಸ್ ರಸ್ತೆಯಲ್ಲಿ ರೆಸಿಡೆನ್ಸಿ ರಸ್ತೆ ಜಂಕ್ಷನ್ ನಿಂದ ಎಂ.ಜಿ ರಸ್ತೆ ಜಂಕ್ಷನ್ ವರೆಗೆ (ಶಂಕರ್ ನಾಗ್ ಚಿತ್ರಮಂದಿರ), ರೆಸಿಡೆನ್ಸಿ ರಸ್ತೆಯ ಆಶಿರ್ವಾದಂ ಜಂಕ್ಷನ್‌ನಿಂದ ಮೆಯೋ ಹಾಲ್ ಜಂಕ್ಷನ್ ವರೆಗೆ ಡಿ.31 ರಂದು ರಾತ್ರಿ 8 ಗಂಟೆ ಬಳಿಕ ಸಂಚಾರ ವ್ಯವಸ್ಥೆ ಮಾರ್ಪಾಡು ಆಗಲಿದೆ.

ಎಂ.ಜಿ ರಸ್ತೆಯಲ್ಲಿ, ಕ್ಲೀನ್ಸ್ ವೃತ್ತದ ಕಡೆಯಿಂದ ಹಲಸೂರು ಹಾಗೂ ಇನ್ನು ಮುಂದಕ್ಕೆ ಹೋಗುವಂತಹ ಚಾಲಕರು, ಅನಿಲ್ ಕುಂಬ್ಳೆ ವೃತ್ತದಲ್ಲಿ ಎಡತಿರುವು ಪಡೆದು, ಸೆಂಟ್ರಲ್ ಸ್ಟ್ರೀಟ್-ಬಿ.ಆರ್.ವಿ ಜಂಕ್ಷನ್-ಬಲ ತಿರುವು ಕಬ್ಬನ್‌ರಸ್ತೆ ಮೂಲಕ ಸಂಚರಿಸಿ ವೆಬ್‌ಜಂಕ್ಷನ್ ಬಳಿ ಎಂ.ಜಿ ರಸ್ತೆಯನ್ನು ಸೇರಿ ಮುಂದೆ ಸಾಗಬೇಕು.

ಹಲಸೂರು ಕಡೆಯಿಂದ ಕಂಟೊನ್ವೆಂಟ್ ಕಡೆಗೆ ಹೋಗುವಂತಹ ವಾಹನಗಳು, ಟ್ರಿನಿಟಿ ವೃತ್ತದಲ್ಲಿ ಬಲ ತಿರುವು ಪಡೆದುಕೊಂಡು ಹಲಸೂರು ರಸ್ತೆ-ಡಿಕೆನ್ಸನದ ರಸ್ತೆ ಮಾರ್ಗವಾಗಿ ಸಂಚರಿಸಿ ಕಬ್ಬನ್‌ರಸ್ತೆ ಸೇರಿ ಮುಂದೆ ಸಾಗಬೇಕು.

ಹಲಸೂರು ಕಡೆಯಿಂದ ಮೆಜಸ್ಟಿಕ್ ಕಡೆಗೆ ಹೋಗುವಂತಯ ವಾಹನಗಳು ಮೆಯೋಹಾಲ್ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಗರುಡ ಮಾಲ್ ಜಂಕ್ಷನ್, ಡಿಸೋಜಾ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ರಿಚ್ಮಂಡ್ ರಸ್ತೆಯ ಮೂಲಕ ಸಾಗಬೇಕು.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗದ ಮೇಲ್ಸೇತುವೆ ಹೊರತುಪಡಿಸಿ ಉಳಿದೆಲ್ಲಾಮೇಲ್ಸೇತುವೆಗಳಲ್ಲಿಡಿ.೩೧ರಂದು ರಾತ್ರಿ 11 ಗಂಟೆಯಿಂದ ಮರುದಿನ ಬೆಳಗ್ಗೆ ೬ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಬೆಂಗಳೂರು ನಗರದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಚರ್ಚ್ ಸ್ಟ್ರೀಟ್‌ನಲ್ಲಿ ಹೊಸವರ್ಷ ಆಚರಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಪೊಲೀಸ್ ವಾಹನಗಳು ಹಾಗೂ ಕರ್ತವ್ಯ ನಿರತ ತುರ್ತು ಸೇವಾ ವಾಹನಗಳನ್ನು ಹೊರತುಪಡಿಸಿ ಉಳಿದ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!