ಸಿಲಿಕಾನ್ ಸಿಟಿಯಲ್ಲಿ ‘ಹೊಸ ವರ್ಷ’: ಗೈಡ್‌ಲೈನ್ ಸಿದ್ಧಪಡಿಸುತ್ತಿದೆ ಪೊಲೀಸ್ ಇಲಾಖೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದೆಡೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ಯಾಲೆಂಡರ್ ಹೊಸ ವರ್ಷಾಚರಣೆ ಸಂಭ್ರಮ ಹತ್ತಿರವಾಗುತ್ತಿದ್ದರೆ ಇನ್ನೊಂದೆಡೆ ಈ ಸಂಭ್ರಮದಲ್ಲಿ ಪಾಲ್ಗೊಳ್ಳಲು ಬರುವ ಮಹಿಳೆಯರಿಗೆ ಯಾವುದೇ ಅಪಾಯ ಉಂಟಾಗದಂತೆ ನೋಡಿಕೊಳ್ಳಲು ವಿಶೇಷ ಗೈಡ್‌ಲೈನ್ ಬಿಡುಗಡೆ ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ವರ್ಷಾಚರಣೆ ಸಂದರ್ಭ ಮಹಿಳೆಯರಿಗೆ ತೊಂದರೆಯಾಗದಂತೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ. ಈಗಾಗಳೆ ಬಿಬಿಎಂಪಿ, ಬೆಸ್ಕಾಂ, ಬಿಎಂಟಿಸಿ, ಮೆಟ್ರೋ, ಅಬಕಾರಿ ಇಲಾಖೆಗಳ ಜೊತೆ ಎರಡು ಸುತ್ತಿನ ಸಭೆ ನಡೆಸಲಾಗಿದೆ. ಇನ್ನು ಸಂಭ್ರಮ ನಡೆಯುವ ಎಂ.ಜಿ ರಸ್ತೆ, ಬ್ರಿಗೆಡ್ ರೋಡ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಖಾಕಿ ಕಣ್ಗಾವಲು ಇರಿಸಲಿದೆ. ಸಮಭ್ರಮದಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ, ಕುಡಿದು ಅತಿರೇಕವಾಗಿ ವರ್ತಿಸುವ ಘಟನೆಗಳು ನಡೆದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!