ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸ ವರ್ಷಾಚರಣೆಯಿಂದಾಗಿ ಅಬಕಾರಿ ಇಲಾಖೆಗೆ ನೂರಾರು ಕೋಟಿ ರೂಪಾಯಿ ಆದಾಯ ಹರಿದುಬಂದಿದೆ, ಒಂದೇ ದಿನದಲ್ಲಿ ಕೆಎಸ್‌ಬಿಸಿಎಲ್‌ನಿಂದ ಬರೋಬ್ಬರಿ 308 ಕೋಟಿ ರೂ. ಮದ್ಯ ಮಾರಾಟವಾಗಿದೆ. ಡಿ.31ರಂದು ಒಂದೇ ದಿನ 308 ಕೋಟಿ ರೂ. ಮೌಲ್ಯದ ಮದ್ಯ ಮಾರಾಟವಾಗಿದೆ.
ಕಳೆದ ವರ್ಷ ಡಿಸೆಂಬರ್ 31, 2023 ರಂದು, 193 ಕೋಟಿ ರೂಪಾಯಿ ಮದ್ಯ ಮಾರಾಟ ಆಗಿತ್ತು, ಈ ಬಾರಿ 2024 ಡಿ.31 ರಂದು 7,305 ಮದ್ಯ ಮಾರಾಟಗಾರರು ಕೆಎಸ್‌ಬಿಸಿಎಲ್‌ನಿಂದ ಮದ್ಯ ಖರೀದಿಸಿದ್ದಾರೆ.