Thursday, June 30, 2022

Latest Posts

ಹೊಸ ವರ್ಷಾಚರಣೆಗೆ ಬಿತ್ತು ಬ್ರೇಕ್:‌ ರಾಜ್ಯದಲ್ಲಿ 10 ದಿನ ನೈಟ್‌ ಕರ್ಫ್ಯೂ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಒಮಿಕ್ರಾನ್‌ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಡಿ.28ರಿಂದ 10 ದಿನಗಳ ಕಾಲ ನೈಟ್‌ ಕರ್ಫ್ಯೂ ಜಾರಿ ಇರಲಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್‌ ತಿಳಿಸಿದ್ದಾರೆ.
ಹೊಸ ವರ್ಷಾಚರಣೆ ಕುರಿತು ಇಂದು ಸಿಎಂ ಬಸವರಾಜ್‌ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ.
ಡಿ.28ರಿಂದ ರಿಂದ 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್‌ ಕರ್ಫೂ ಜಾರಿ ಇರಲಿದೆ. ಸಾರ್ವಜನಿಕ ಸ್ಥಳಗಳಲ್ಲಿ ಈ ಬಾರಿ ಹೊಸ ವರ್ಷದ ಆಚರಣೆ ಮಾಡುವಂತಿಲ್ಲ. ಸಭೆ ಸಮಾರಂಭಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಪಬ್‌ ಹಾಗೂ ಹೊಟೇಲ್‌ ಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದರು.
ಈ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ, ಕಂದಾಯ ಸಚಿವ ಆರ್.‌ ಅಶೋಕ್‌, ಗೃಹ ಸಚಿವ ಆರಗ ಜ್ಞಾನೇಂದ್ರ , ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಆರೋ ಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss