ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ನಲ್ಲಿ ಭಾರತದ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲ್ಯಾಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ನ್ಯೂಜಿಲ್ಯಾಂಡ್ ಕೀಪರ್ ಸೀಫರ್ಟ್ ಹೊರಗಿಟ್ಟು ಆ್ಯಡಂ ಮಿಲ್ನೆಯನ್ನು ಹೆಚ್ಚುವರಿ ಬೌಲರ್ ಆಗಿ ಆಯ್ಕೆ ಮಾಡಿಕೊಂಡಿದೆ.
ಈ ಪಂದ್ಯದಲ್ಲಿ ಬೆನ್ನು ನೋವಿಗೆ ಒಳಗಾಗಿರುವ ಸೂರ್ಯಕುಮಾರ್ ಯಾದವ್ ಬದಲಿಗೆ ಇಶಾನ್ ಕಿಶನ್ ಅವಕಾಶ ಪಡೆದಿದ್ದಾರೆ. ಭುವನೇಶ್ವರ್ ಕುಮಾರ್ ಬದಲಿಗೆ ಶಾರ್ದುಲ್ ಠಾಕೂರ್ ಕಣಕ್ಕಿಳಿಯಲಿದ್ದಾರೆ.