ವಿಶ್ವಕಪ್ ಟೂರ್ನಿಗೆ ನ್ಯೂಜಿಲೆಂಡ್ ತಂಡ ಪ್ರಕಟ: ಅನೌನ್ಸ್ ಮಾಡಿದ್ದು ಯಾರು ಗೊತ್ತೇ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ವಿನೂತನ ಶೈಲಿಯಲ್ಲಿ ನ್ಯೂಜಿಲೆಂಡ್ ತಂಡ ಪ್ರಕಟವಾಗಿದ್ದು, ಕ್ಯಾಪ್ಟನ್ ಕೂಲ್ ಖ್ಯಾತಿಯ ಕೇನ್ ವಿಲಿಯಮ್ಸನ್‌, ಕಿವೀಸ್ ತಂಡವನ್ನು ಮುನ್ನಡೆಸಲಿದ್ದಾರೆ.

ನ್ಯೂಜಿಲೆಂಡ್‌ ತಂಡವು ವಿನೂತನ ಶೈಲಿಯಲ್ಲಿ ವಿಶ್ವಕಪ್ ಟೂರ್ನಿಗೆ ತಂಡವನ್ನು ಪ್ರಕಟಿಸಿದ್ದು, ಜತೆಗಾರ್ತಿಯರು ಹಾಗೂ ಪತ್ನಿಯರು ತಮ್ಮ ಪಾರ್ಟ್ನರ್‌ ಹೆಸರನ್ನು ವಿಶ್ವಕಪ್ ಟೂರ್ನಿಗೆ ಪ್ರಕಟಿಸಿದ್ದು, ಕಿವೀಸ್ ಕ್ರಿಕೆಟ್ ಮಂಡಳಿಯ ಈ ನಡೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ

ಅನುಭವಿ ಎಡಗೈ ವೇಗಿ ಟ್ರೆಂಟ್ ಬೌಲ್ಟ್, ಕಿವೀಸ್ ತಂಡದ ವೇಗದ ಬೌಲಿಂಗ್ ಪಡೆಯನ್ನು ಮುನ್ನಡೆಸಲಿದ್ದಾರೆ. ಆದರೆ ಸ್ಪೋಟಕ ಬ್ಯಾಟರ್ ಫಿನ್ ಅಲೆನ್ ಹಾಗೂ ಆಡಂ ಮಿಲ್ನೆ ವಿಶ್ವಕಪ್ ಕಿವೀಸ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ.

2019ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದಿದ್ದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ತಂಡವು ಫೈನಲ್ ಪ್ರವೇಶಿಸಿತ್ತಾದರೂ, ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ದ ಸೂಪರ್ ಓವರ್ ಹಾಗೂ ಬೌಂಡರಿ ಕೌಂಟ್ ನಿಯಮದನ್ವಯ ಸೋಲು ಅನುಭವಿಸಿತ್ತು.

ಕೇನ್ ವಿಲಿಯಮ್ಸನ್(ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಂಪ್ಮನ್, ಡೆವೊನ್ ಕಾನ್‌ವೇ, ಲಾಕಿ ಫರ್ಗ್ಯೂಸನ್, ಮ್ಯಾಟ್ ಹೆನ್ರಿ, ಟಾಮ್ ಲೇಥಮ್, ಡೇರಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಫ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋದಿ, ಟಿಮ್ ಸೌಥಿ, ವಿಲ್ ಯಂಗ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!