ನ್ಯೂಜಿಲೆಂಡ್ ಪ್ರವಾಸ: ಪಾಂಡ್ಯ, ಧವನ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಪ್ರಕಟ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳನ್ನು ಆಡಲು ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿರುವ ಭಾರತದ 16 ಸದಸ್ಯರ ತಂಡ ಪ್ರಕಟವಾಗಿದ್ದು, ಹಾರ್ದಿಕ್ ಪಾಂಡ್ಯ ನಾಯಕನನ್ನಾಗಿ ನೇಮಿಸಲಾಗಿದೆ.

ಇನ್ನು ತಂಡಕ್ಕೆ ಉಮ್ರಾನ್ ಮಲಿಕ್ ಅವರನ್ನು ವಾಪಸ್ ಕರೆಸಿಕೊಳ್ಳಲಾಗಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಟಿ20ಐನಲ್ಲಿ ಹಾರ್ದಿಕ್ ಪಾಂಡ್ಯ ಭಾರತ ತಂಡವನ್ನ ಮುನ್ನಡೆಸಲಿದ್ದು,ಶಿಖರ್ ಧವನ್ ಕಿವೀಸ್ ವಿರುದ್ಧದ ಏಕದಿನ ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಲಿದ್ದಾರೆ.

ಭಾರತ ಟಿ20 ತಂಡ ಇಂತಿದೆ: ಹಾರ್ದಿಕ್ ಪಾಂಡ್ಯ (ನಾಯಕ), ರಿಷಭ್ ಪಂತ್ (ವಿಸಿ), ಇಶಾನ್ ಕಿಶನ್, ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್, ಯಜುವೇಂದ್ರ ಚಹಲ್, ಕುಲ್ದೀಪ್, ಹರ್ಷಲ್ ಪಟೇಲ್, ಸಿರಾಜ್, ಭುವನೇಶ್ವರ್, ಅರ್ಶ್ದೀಪ್, ಉಮ್ರಾನ್ ಮಲಿಕ್

ಭಾರತ ಏಕದಿನ ತಂಡ ಇಂತಿದೆ: ಶಿಖರ್ ಧವನ್ (ನಾಯಕ), ರಿಷಭ್ ಪಂತ್ (ವಿಸಿ), ಶುಭ್ಮನ್ ಗಿಲ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಚಹಲ್ ಕುಲ್ದೀಪ್ ಯಾದವ್, ಶಹಬಾಜ್ ಅಹ್ಮದ್, ವಾಷಿಂಗ್ಟನ್ ಸುಂದರ್, ಉಮ್ರಾನ್ ಮಲಿಕ್, ಕುಲ್ದೀಪ್ ಸೇನ್, ಅರ್ಷ್ದೀಪ್ ಸಿಂಗ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!