Monday, December 22, 2025

New Zealand vs West Indies | ಟೆಸ್ಟ್‌ನಲ್ಲಿ ನ್ಯೂಝಿಲೆಂಡ್ ಅಬ್ಬರದ ಪ್ರದರ್ಶನ: ಬರೋಬ್ಬರಿ 323 ರನ್​ಗಳ ಭರ್ಜರಿ ಜಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ನ್ಯೂಜಿಲೆಂಡ್ ತಂಡ ಸಂಪೂರ್ಣ ಪ್ರಾಬಲ್ಯ ತೋರಿದ್ದು, ಭರ್ಜರಿ ಜಯದೊಂದಿಗೆ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಬೇ ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬ್ಯಾಟಿಂಗ್, ಬೌಲಿಂಗ್ ಎರಡೂ ವಿಭಾಗಗಳಲ್ಲಿ ಕಿವೀಸ್ ಆಟಗಾರರು ಎದುರಾಳಿಯನ್ನು ಸಂಪೂರ್ಣವಾಗಿ ಮಣಿಸಿದರು.

ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ಪ್ರಥಮ ಇನಿಂಗ್ಸ್‌ನಲ್ಲಿ 8 ವಿಕೆಟ್ ನಷ್ಟಕ್ಕೆ 575 ರನ್ ಗಳಿಸಿ ಡಿಕ್ಲೇರ್ ಘೋಷಿಸಿತು. ಇದಕ್ಕೆ ಉತ್ತರವಾಗಿ ವೆಸ್ಟ್ ಇಂಡೀಸ್ ತಂಡ 420 ರನ್ ಗಳಿಸಿ ಆಲೌಟ್ ಆಯಿತು. ಮೊದಲ ಇನಿಂಗ್ಸ್‌ನಲ್ಲಿ 155 ರನ್ ಮುನ್ನಡೆ ಪಡೆದ ಕಿವೀಸ್ ಪಡೆ, ಎರಡನೇ ಇನಿಂಗ್ಸ್‌ನಲ್ಲಿ ಕೇವಲ ಎರಡು ವಿಕೆಟ್ ಕಳೆದುಕೊಂಡು 306 ರನ್ ಗಳಿಸಿ ಮತ್ತೆ ಡಿಕ್ಲೇರ್ ನೀಡಿತು.

462 ರನ್‌ಗಳ ಭಾರೀ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಲೈನ್‌ಅಪ್ ಸಂಪೂರ್ಣ ಕುಸಿದಿದ್ದು, ಕೇವಲ 138 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ನ್ಯೂಜಿಲೆಂಡ್ ತಂಡ 323 ರನ್‌ಗಳ ಅಂತರದಿಂದ ಅಮೋಘ ಜಯ ದಾಖಲಿಸಿತು. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಕಿವೀಸ್ ಪಡೆ 2–0 ಅಂತರದಿಂದ ಗೆದ್ದುಕೊಂಡಿತು.

error: Content is protected !!