Saturday, April 1, 2023

Latest Posts

ಮೇಘಾಲಯ : ನೂತನವಾಗಿ ಆಯ್ಕೆಯಾದ ಶಾಸಕರ ಪ್ರಮಾಣ ವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮೇಘಾಲಯದ ನೂತನ ಚುನಾಯಿತ ಶಾಸಕರು ಸೋಮವಾರ ಬೆಳಗ್ಗೆ ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಹಂಗಾಮಿ ಸ್ಪೀಕರ್ ತಿಮೋತಿ ಡಿ ಶಿರಾ ಅವರು 59 ಶಾಸಕರಿಗೆ ಪ್ರಮಾಣ ವಚನ ಬೋಧಿಸಿದರು. ಅವರಲ್ಲಿ 45 ಮಂದಿ ಕಾನ್ರಾಡ್ ಸಂಗ್ಮಾ ನೇತೃತ್ವದಲ್ಲಿ ಸರ್ಕಾರ ರಚಿಸಲು ಎನ್‌ಪಿಪಿ ನೇತೃತ್ವದ ಒಕ್ಕೂಟಕ್ಕೆ ಸೇರಿದ್ದಾರೆ. ಕಾರ್ಯಕ್ರಮದಲ್ಲಿ ನಿರ್ಗಮಿತ ಮುಖ್ಯಮಂತ್ರಿ ಕಾರ್ನಾಡ್ ಸಂಗ್ಮಾ ಅವರು ಭಾಗಿಯಾಗಿದ್ದರು.

ಬುಧವಾರ ನಡೆಯಲಿರುವ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಸ್ಪೀಕರ್ ಆಯ್ಕೆಗಾಗಿ ಸದನವು ಮಾರ್ಚ್ 9 ರಂದು ಮತ್ತೆ ಸಭೆ ಸೇರಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!