ಹೊಸದಿಗಂತ ಡಿಜಿಟಲ್ ಡೆಸ್ಕ್:
ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮದುವೆಯಾದ ನಾಲ್ಕೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆಗೆ ಶರಣಾದ ಘಟನೆ ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ನಡೆದಿದೆ.
ಮಯೂರಿ ಗೌರವ್ ತೋಸರ್ (23) ಆತ್ಮಹತ್ಯೆಗೆ ಶರಣಾದ ಮಹಿಳೆ. ಅತ್ತೆ-ಮಾವ ನಿರಂತರ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿ, ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ.
ನಾಲ್ಕು ತಿಂಗಳ ಅವಧಿಯಲ್ಲಿ ಹಲವಾರು ಬಾರಿ ಕುಟುಂಬಸ್ಥರ ಜೊತೆ ರಾಜಿ ಪ್ರಯತ್ನಗಳು ನಡೆದಿವೆ. ಚಿತ್ರಹಿಂಸೆ ಮುಂದುವರಿದಿದ್ದರಿಂದ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅತ್ತೆ-ಮಾವನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ. ಈ ಸಂಬಂಧ ಪೊಲೀಸರು ಈ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.