March 25, 2026
Wednesday, March 25, 2026
spot_img

ಮದುವೆ ಸಂಭ್ರಮ ಮಾಸುವ ಮುನ್ನವೇ ವಿಧಿಯಾಟ: ನವವಿವಾಹಿತ ಹೃದಯಾಘಾತಕ್ಕೆ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾದನಾಯಕನಹಳ್ಳಿ ಸಮೀಪದ ಅರೆಕೆತ್ತನಹಳ್ಳಿಯಲ್ಲಿ ಮನಕಲಕುವ ಘಟನೆಯೊಂದು ಸಂಭವಿಸಿದ್ದು, ಮದುವೆಯಾದ ಕೇವಲ ಮೂರು ತಿಂಗಳಲ್ಲೇ ನವವಿವಾಹಿತನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.

ಅರೆಕೆತ್ತನಹಳ್ಳಿಯ ನಿವಾಸಿ ಚರಣ್ (30) ಮೃತಪಟ್ಟ ದುರ್ದೈವಿ. ವೃತ್ತಿಯಲ್ಲಿ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ಆಗಿದ್ದ ಇವರಿಗೆ ಇಂದು ಬೆಳಿಗ್ಗೆ ಮನೆಯಲ್ಲಿದ್ದಾಗ ಹಠಾತ್ತನೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ತೀವ್ರ ಅಸ್ವಸ್ಥಗೊಂಡ ಇವರು ಕ್ಷಣಾರ್ಧದಲ್ಲೇ ಮನೆಯಲ್ಲೇ ಕುಸಿದು ಬಿದ್ದಿದ್ದಾರೆ.

ಕುಟುಂಬಸ್ಥರು ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರಾದರೂ, ಪರೀಕ್ಷಿಸಿದ ವೈದ್ಯರು ಚರಣ್ ಈಗಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಮೂರು ತಿಂಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕನ ಅಕಾಲಿಕ ಸಾವು ಕುಟುಂಬಸ್ಥರಲ್ಲಿ ಹಾಗೂ ಗ್ರಾಮದಲ್ಲಿ ಶೋಕದ ಛಾಯೆ ಮೂಡಿಸಿದೆ.

ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲದ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !