ಬಂಟ್ವಾಳ: ಗಂಡನ ಮನೆಯ ವರದಕ್ಷಿಣೆ ಕಿರುಕುಳದಿಂದ ಮಾನಸಿಕವಾಗಿ ನೊಂದ ನವ ವಿವಾಹಿತೆಯೋರ್ವಳು ತನ್ನ ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ನೌಸೀನ್ (22) ಆತ್ಮಹತ್ಯೆಗೆ ಶರಣಾದ ಗೃಹಿಣಿಯಾಗಿದ್ದಾಳೆ.
ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಜೊತೆ ಮೂರು ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದರು. ಈ ಸಂದರ್ಭದಲ್ಲಿ 18 ಪವನ್ ಚಿನ್ನವನ್ನು ವರದಕ್ಷಿಣೆ ರೂಪದಲ್ಲಿ ನೀಡಲಾಗಿತ್ತು. ಕೆಲ ದಿನಗಳಿಂದ ವರದಕ್ಷಿಣೆ ವಿಚಾರದಲ್ಲಿ ಅತ್ತೆ ಝೂಬೈದಾ, ಮಗಳು ಅಜ್ಮೀಯಾ ಮತ್ತು ಗಂಡ ಸೇರಿಕೊಂಡು ಮಾನಸಿಕ ಕಿರುಕುಳ ಕೊಡುತ್ತಿದ್ದರೆನ್ನಲಾಗಿದೆ.
ಇದರಿಂದಾಗಿ ನೊಂದ ನೌಸೀನ್ ಸಜೀಪ ತಾಯಿ ಮನೆಗೆ ವಾಪಾಸಾಗಿದ್ದು, ಆ.25 ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿಕೇಸು ದಾಖಲಾಗಿದ್ದು,ಮುಂದಿನ ತನಿಖೆ ನಢಯುತ್ತಿದೆ.