October 9, 2026
Friday, October 9, 2026
spot_img

ಈಗಷ್ಟೇ ಮದುವೆಯಾಗಿದ್ದ ಕಪಲ್‌ ಜಾಲಿ ರೈಡ್‌ ವೇಳೆ ಅಪಘಾತ: ತುಮಕೂರಿನಲ್ಲಿ ಹಿಟ್‌ & ರನ್‌ಗೆ ದಂಪತಿ ಸಾ*ವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈಗಷ್ಟೇ ಮದುವೆಯಾದ ಜೋಡಿ ಹೊರಗಡೆ ಏಕಾಂತದಲ್ಲಿ ಸುತ್ತಾಟ ಮಾಡೋದು ತುಂಬಾನೇ ಕಾಮನ್‌. ಬರೀ ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಜೋಡಿ ಸುತ್ತಾಟಕ್ಕೆ ಹೋದ ವೇಳೆ ಭೀಕರ ಅಪಘಾತವೊಂದು ಸಂಭವಿಸಿದೆ.

ತುಮಕೂರಿನ ಶಿರಾ ತಾಲೂಕಿನ ದ್ವಾರಾಳು ಸೇತುವೆ ಬಳಿ ಬೈಕ್‌ನಲ್ಲಿ ಬೆಂಗಳೂರಿನತ್ತ ತೆರಳುವ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ಇದರಿಂದಾಗಿ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಶಿರಾ ತಾಲೂಕಿನ ಹುಣಸೇಕಟ್ಟೆ ಗ್ರಾಮದ ದರ್ಶನ್‌ ಹಾಗೂ ಉಷಾರಾಣಿ ಮೃತರು.

ಘಟನೆಯಲ್ಲಿ ದರ್ಶನ್ ಸ್ಥಳದಲ್ಲೇ ಮೃತಪಟ್ಟರೆ, ಗಾಯಾಳು ಉಷಾರಾಣಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಕ್ಕಿ ಹೊಡೆದ ವಾಹನಕ್ಕಾಗಿ ಹುಡುಕಾಟ ನಡೆದಿದೆ. ಬಾಳಿ ಬದುಕಬೇಕಾಗಿದ್ದ ಜೋಡಿ ಮೃತಪಟ್ಟಿರುವುದನ್ನು ಕಂಡು ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಮಕ್ಕಳನ್ನು ಕೊಂದು ಹೋದವರನ್ನು ಸುಮ್ಮನೆ ಬಿಡಬೇಡಿ ಎಂದು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

Must Read