ಆತ್ಮಹತ್ಯೆಗೆ ಶರಣಾದ ನವ ವಿವಾಹಿತೆ

ಹೊಸದಿಗಂತ ವರದಿ,ಮಡಿಕೇರಿ:

ನವ ವಿವಾಹಿತೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಿದ್ದಾಪುರ ಸಮೀಪದ ತೂಬನಕೊಲ್ಲಿಯಲ್ಲಿ ನಡೆದಿದೆ.
ಕಳೆದ ಒಂದು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಚೈತ್ರಾ(25) ಎಂಬಾಕೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.
ಕಳೆದ ಒಂದು ತಿಂಗಳ ಹಿಂದೆ ಹೊದ್ದೂರು ಗ್ರಾಮದ ಯುವಕನೊಂದಿಗೆ ಮದುವೆ ನಡೆದಿತ್ತು. ಕೆಲವು ದಿನಗಳ ಹಿಂದೆ ಯುವತಿ ತೂಬನಕೊಲ್ಲಿಯ ಲೈನ್ ಮನೆಯಲ್ಲಿರುವ ತಾಯಿ ಮನೆಗೆ ಬಂದಿದ್ದು, ಸೋಮವಾರ ಮನೆಯಲ್ಲಿ ಯಾರೂ‌ ಇಲ್ಲದ ಸಮಯದಲ್ಲಿ ಮನೆಯೊಳಗೆ ನೇಣು‌ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ
ಸ್ಥಳಕ್ಕೆ ಸಿದ್ದಾಪುರ ಪೊಲೀಸರು‌ ಭೇಟಿ‌ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ‌ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!