ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ‘ತ್ರಿವಳಿ ತಲಾಖ್’ ಮೂಲಕ ವಿಚ್ಛೇದನ ನೀಡಿದ ಪತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಉತ್ತರ ಪ್ರದೇಶದ ಗೊಂಡಾ ಪ್ರದೇಶದಲ್ಲಿ ವರದಕ್ಷಿಣೆ ನೀಡದ ಕಾರಣಕ್ಕೆ ಮಹಿಳೆಯೊಬ್ಬಳ ಮೇಲೆ ಆಕೆಯ ಪತಿ ಆತನ ಸೋದರ ಸಂಬಂಧಿಯೊಂದಿಗೆ ಅತ್ಯಾಚಾರವೆಸಗಿ ನಂತರ ತ್ರಿವಳಿ ತಲಾಖ್ ಮೂಲಕ ವಿಚ್ಛೇದನ ನೀಡಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಆರೋಪಿ ಪತಿ ಲಕ್ನೋ ಮೂಲದ ಮೊಹಮ್ಮದ್ ಅದ್ನಾನ್ ನನ್ನು ಈ ಸಂಬಂಧ ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಆತನ ಸೋದರ ಸಂಬಂಧಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ತನ್ನ ಪತಿ ವರದಕ್ಷಿಣೆಗಾಗಿ ಒತ್ತಾಯಿಸುತ್ತಿದ್ದ ಮತ್ತು ಅದಕ್ಕಾಗಿ ತನಗೆ ಥಳಿಸುತ್ತಿದ್ದ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಆತ ಅತಿಯಾಗಿ ಹಿಂಸೆ ನೀಡುತ್ತಿದ್ದ ಕಾರಣ ಅವಳು ತನ್ನ ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದಳು. ಮಂಗಳವಾರ ತನ್ನ ಅತ್ತೆಯ ಮನೆಗೆ ಹೋಗಿದ್ದ ಅದ್ನಾನ್ ಮತ್ತು ಆತನ ಸೋದರಸಂಬಂಧಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.
ನಂತರ ಅದ್ನಾನ್ ಆಕೆಯನ್ನು ಥಳಿಸಿ, ಕಾನೂನುಬಾಹಿರವಾದ ‘ತ್ರಿವಳಿ ತಲಾಖ್’ ಮೂಲಕ ವಿಚ್ಛೇದನ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತಲೆಮರೆಸಿಕೊಂಡಿರುವ ಸೋದರ ಸಂಬಂಧಿಯನ್ನು ಹಿಡಿಯುವ ಪ್ರಯತ್ನ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!