ಕುಟುಂಬ ಸದಸ್ಯರ ಜೊತೆ ಚರ್ಚಿಸಿಯೇ ಮುಂದಿನ ನಿರ್ಧಾರ: ಹೃದ್ರೋಗ ತಜ್ಞ ಡಾ.ಮಂಜುನಾಥ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಕೀಯಕ್ಕೆ ಬರುವ ವಿಚಾರದಲ್ಲಿ ನನ್ನಲ್ಲಿ ಇನ್ನೂ ಗೊಂದಲಗಳಿವೆ. ಪತ್ನಿ, ಮಕ್ಕಳು, ಕುಟುಂಬ ಸದಸ್ಯರ ಜೊತೆ ಚರ್ಚೆ ಮಾಡಿದ ಮೇಲೆಯೇ ಮುಂದಿನ ನಿಲುವನ್ನು ನಿರ್ಧರಿಸಬೇಕಾಗಿದೆ ಎಂದು ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ.

ಮೈಸೂರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನ ಹಾಗೂ ಮಾಧ್ಯಮದವರು ನನ್ನ ಮೇಲಿನ ಪ್ರೀತಿಯಿಂದ ನನ್ನ ರಾಜಕೀಯ ಪ್ರವೇಶದ ಬಗ್ಗೆ ಮಾತನಾಡುತ್ತಿದ್ದಾರೆ. ರಾಜಕಾರಣಕ್ಕೆ ಬರಬೇಕೋ ಬೇಡವೋ ಎನ್ನುವ ಗೊಂದಲವಿದೆ. ಹಾಗಂತ ರಾಜಕೀಯಕ್ಕೆ ಬರಲು ಭಯ ಪಡುತ್ತಿದ್ದೇನೆ ಎಂದು ಅರ್ಥವಲ್ಲ. ರಾಜಕೀಯ ಹೊಸ ಕ್ಷೇತ್ರ, ಹೇಗೋ ಏನೋ ಎಂದು ನೋಡಬೇಕು. ಹಾಗಾಗಿ ಈ ಬಗ್ಗೆ ಸದ್ಯಕ್ಕೆ ನಾನು ತೀರ್ಮಾನ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಜಯದೇವದಲ್ಲಿ ಮಾಡಿದ ಒಳ್ಳೆಯ ಕೆಲಸದ ನೀರಿಕ್ಷೆಯಲ್ಲೇ ಈ ಒತ್ತಾಯಗಳು ಕೇಳಿ ಬರುತ್ತಿವೆ. ನನಗೆ ಬೀದಿ ರಾಜಕೀಯ ಇಷ್ಟ ಇಲ್ಲ. ಅಭಿವೃದ್ಧಿಯ ಪಾಲಿಟಿಕ್ಸ್ ಬಗ್ಗೆ ಆಸಕ್ತಿ ಇದೆ ಎಂದು ಹೇಳಿದ್ದಾರೆ.

ಮಂಜುನಾಥ್ ಅವರು ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ನಿಟ್ಟಿನಲ್ಲಿ ಮಂಜುನಾಥ್ ಮನವೊಲಿಕೆಗೆ ಜೆಡಿಎಸ್​ ನಾಯಕರು ಮುಂದಾಗಿದ್ದರು. ಜತೆಗೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಜುನಾಥ್ ಅವರನ್ನು ಸ್ಪರ್ಧಿಸುವಂತೆ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿದ್ದವು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!