ಮುಂದಿನ ವಾರ ರೈತರ ಖಾತೆಗೆ ಬೆಳೆಹಾನಿ ಪರಿಹಾರದ ಮೊದಲ ಕಂತು 2 ಸಾವಿರ ಜಮಾ: ಸಚಿವ ಕೃಷ್ಣಭೈರೇಗೌಡ

ಹೊಸದಿಗಂತ ಡಿಜಿಟಲ್‌ಡೆಸ್ಕ್:‌

ರೈತರಿಗೆ ಬರ ಪರಿಹಾರದ ಮೊದಲ ಕಂತಿನ ಹಣ 2000 ಮುಂದಿನ ವಾರ ರೈತರ ಖಾತೆಗೆ ಡಿಬಿಟಿ ಮೂಲಕ ಜಮಾ ಆಗಲಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ಇಂದು ಬೆಳಗಾವಿಯಲ್ಲಿ ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಕೇಳಿದಂತ ಪ್ರಶ್ನೆಗೆ ಉತ್ತರಿಸಿದರು.

ಮುಂಗಾರು ಅವಧಿಯಲ್ಲಿ ಸೆ.13ರಂದು ರಾಜ್ಯದಲ್ಲಿ ಬರಗಾಲ ಘೋಷಣೆ ಮಾಡಲಾಗಿತ್ತು .ರಾಜ್ಯದ ರೈತರಿಗೆ ಬರ ಪರಿಹಾರದ ಮೊದಲ ಕಂತಿನ ಹಣ 2000 ಮುಂದಿನ ವಾರ ರೈತರ ಖಾತೆಗೆ ಡಿಬಿಟಿ ಮೂಲಕ ಜಮಾ ಆಗಲಿದೆ. ದೇಶದ 12 ರಾಜ್ಯಗಳಲ್ಲಿ ಮುಂಗಾರು ಅವಧಿಯ ಬರಗಾಲವಿದೆ. 18 ರಾಜ್ಯಗಳಲ್ಲಿ ಹಿಂಗಾರು ಅವಧಿಯ ಬರಗಾಲ ಆವರಿಸಿದೆ.ಸೆ.22ರಂದು ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ಬಿಡುಗಡೆಗೆ ಕೋರಲಾಗಿದೆ. ಮೇವಿನ ಕೊರತೆಯಾಗದಂತೆ 7 ಲಕ್ಷ ಭಿತ್ತನೆ ಬೀಜಗದ ಕಿಟ್ ಗಳನ್ನು ಬರ ಪೀಡಿತ ತಾಲ್ಲೂಕುಗಳಲ್ಲಿ ರೈತರಿಗೆ ಕೊಟ್ಟಿದ್ದೇವೆ ಎಂದರು. ಸೆ.22ರಂದು ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ಬಿಡುಗಡೆಗೆ ಕೋರಲಾಗಿದೆ. ಮೇವಿನ ಕೊರತೆಯಾಗದಂತೆ 7 ಲಕ್ಷ ಭಿತ್ತನೆ ಬೀಜದ ಕಿಟ್ ಗಳನ್ನು ಬರ ಪೀಡಿತ ತಾಲ್ಲೂಕುಗಳಲ್ಲಿ ರೈತರಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!