Sunday, October 1, 2023

Latest Posts

JOB | ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 62 ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 62 ವ್ಯವಸ್ಥಾಪಕ, ಡೆಪ್ಯುಟಿ ವ್ಯವಸ್ಥಾಪಕ ಮತ್ತು ಕಿರಿಯ ಹಿಂದಿ ಅನುವಾದಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್‌ ಪದವಿ ಮತ್ತು ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,400/- ರಿಂದ 2,15,900/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅಕ್ಟೋಬರ್‌ 27,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!