JOB| ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಜರ್ನಲಿಸಂ ಮಾಡಿದವರಿಗೆ ಉದ್ಯೋಗಾವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದ್ದು, ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಪತ್ರಿಕೋದ್ಯಮ & ಸಮೂಹ ಮಾಧ್ಯಮಗಳು/ ಪಬ್ಲಿಕ್ ರಿಲೇಶನ್ಸ್​​ನಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ಆಗಸ್ಟ್​ 3,2023ರ ಅನ್ವಯ ಗರಿಷ್ಠ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅಭ್ಯರ್ಥಿಯನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 78,000/- ರಿಂದ 2,00,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅಭ್ಯರ್ಥಿಗಳು ಆಫ್‌ಲೈನ್‌ ಅಥವಾ ಆನ್‌ಲೈನ್‌ ಮೂಲಕವೂ ಆಗಸ್ಟ್​ 3,2023ರೊಳಗೆ ಅರ್ಜಿ ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!