Sunday, June 26, 2022

Latest Posts

ನಾಗಾಲ್ಯಾಂಡ್‌ನಲ್ಲಿ ನಾಗರಿಕರ ಹತ್ಯೆ: ರಾಜ್ಯ, ಕೇಂದ್ರ ಸರ್ಕಾರಕ್ಕೆ ಎನ್‌ಎಚ್‌ಆರ್‌ಸಿ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಗಾಲ್ಯಾಂಡ್‌ನಲ್ಲಿ ನಡೆದ ನಾಗರಿಕರ ಹತ್ಯೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ನೋಟಿಸ್ ನೀಡಿದೆ.
ರಕ್ಷಣಾ ಕಾರ್ಯದರ್ಶಿ, ಕೇಂದ್ರ ಗೃಹ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ, ನಾಗಾಲ್ಯಾಂಡ್‌ನ ಡಿಜಿಪಿ ಅವರಿಗೆ ನೋಟಿಸ್ ನೀಡಲಾಗಿದ್ದು, ಆರು ವಾರದೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಉಗ್ರ ನಿಗ್ರಹ ಕಾರ್ಯಾಚರಣೆ ಇದಾಗಿದ್ದರೂ ಮಾನವೀಯ ಧೋರಣೆ ಇರಬೇಕಿತ್ತು. ಸರಿಯಾದ ಮುನ್ನೆಚ್ಚರಿಕೆ ಕ್ರಮಗಳನ್ನು ಭದ್ರತಾ ಪಡೆಗಳು ತೆಗೆದುಕೊಳ್ಳಬೇಕಿದ್ದು ಅವರ ಜವಾಬ್ದಾರಿಯಾಗಿತ್ತು ಎಂದು ಆಯೋಗ ತಿಳಿಸಿದೆ.
ನಾಗಾಲ್ಯಾಂಡ್‌ನ ಮೊನ್ ಜಿಲ್ಲೆಯ ಟಿರು ಮತ್ತು ಒಟಿಂಗ್ ಗ್ರಾಮಗಳಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ವೇಳೆ 13 ನಾಗರಿಕರನ್ನು ಗುಂಡಿಟ್ಟು ಕೊಲ್ಲಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss