ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗ ಮೂಲದ ಭಯೋತ್ಪಾದಕ ಸಂಚುಗಾರ ಅರಾಫತ್ ಅಲಿ ಎಂಬಾತನನ್ನು ಎನ್ಐಎ ಪೊಲೀಸರು ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಈತ ನೇರವಾಗಿ ಎಲ್ಲಿಯೂ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಆದರೆ, ಉಗ್ರ ಚಟುವಟಿಕೆಗಳಿಗೆ ವಿದೇಶಗಳಲ್ಲಿಯೇ ಕುಳಿತು ಹಣದ ವ್ಯವಸ್ಥೆ ಮಾಡುತ್ತಿದ್ದ. 2020ರಲ್ಲಿ ಕರ್ನಾಟಕದ ಮೋಸ್ಟ್ ವಾಂಟೆಡ್ ಉಗ್ರ ಅಬ್ದುಲ್ ಮತೀನ್ ಜೊತೆಗೆ ಅರಾಫತ್ ಅಲಿ ದೇಶ ಬಿಟ್ಟು ಹೋಗಿದ್ದನು.
ನೈರೋಬಿಯಿಂದ ದೆಹಲಿಗೆ ಬಂದಿದ್ದ ಇತನನ್ನು, ದೆಹಲಿ ವಿಮಾನ ನಿಲ್ದಾಣದಲ್ಲಿ ಎನ್ಐಎ ಪೊಲೀಸರು ಬಂಧಿಸಿದ್ದಾರೆ.
ಅಲಿ ವಿದೇಶದಿಂದ ಕೆಲಸ ಮಾಡುತ್ತಿದ್ದು ಮುಸ್ಲಿಂ ಯುವಕರನ್ನು ಗುರುತಿಸುವುದು, ಆಮೂಲಾಗ್ರಗೊಳಿಸುವುದು ಮತ್ತು ಐಎಸ್ಗೆ ಸೇರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದನು.