‘NIA’ ದಾಳಿಯು ಧರ್ಮಾಧಾರಿತವಲ್ಲ ಅಪರಾಧ ಆಧಾರಿತ: ಗೃಹ ಸಚಿವ ಆರಗ ಜ್ಞಾನೇಂದ್ರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಬೆಂಗಳೂರು, ಶಿವಮೊಗ್ಗ , ಮೈಸೂರು, ಮಂಗಳೂರು ಸೇರಿದಂತೆ ವಿವಿಧೆಡೆ ದಾಳಿಯಾಗಿದೆ. ಎನ್‌ಐಎ ದಾಳಿ ಧರ್ಮಾಧಾ ರಿತವಲ್ಲ ಅಪರಾಧ ಆಧಾರಿತವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಖಚಿತ ಮಾಹಿತಿ ಮೇರೆಗೆ NIA ಸಿಬ್ಬಂದಿಗಳು, ಹಲವು ಕಡೆ ಶೋಧ ನಡೆಸಿದ್ದಾರೆ , ಕಾನೂನನ್ನು ಕೈಗೆ ತೆಗೆದುಕೊಳ್ಳುವ ಯಾರ ವಿರುದ್ಧವೇ ಆಗಲಿ, ಕ್ರಮ ಜರುಗಿಸಲಾಗುತ್ತದೆ ಎಂದು ಗೃಹ ಸಚಿವರು ಸ್ಪಷ್ಟ ಪಡಿಸಿದ್ದಾರೆ.
ಸಮಾಜದಲ್ಲಿ, ಶಾಂತಿ ಸುವ್ಯವಸ್ಥೆ, ಸೌಹಾರ್ದತೆ ಕಾಪಾಡುವ ಜವಾಬ್ದಾರಿ ಹೊತ್ತಿರುವ ಪೊಲೀಸ್ ಸಿಬ್ಬಂದಿಯೊಂದಿಗೆ, ಎಲ್ಲರೂ ಸಹಕರಿಸಬೇಕು ಎಂದು ಗೃಹಸಚಿವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!