spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಾಜಿ ಶಾಸಕ ಬಿ.ಎಂ. ಇದಿನಬ್ಬ ಪುತ್ರನ ಮನೆಗೆ ಬೆಳ್ಳಂಬೆಳಗ್ಗೆ ಎನ್’ಐಎ ದಾಳಿ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಮಂಗಳೂರು:

ಮಂಗಳೂರಿನಲ್ಲಿ ಬುಧವಾರ ಮುಂಜಾನೆ ಮಾಜಿ ಶಾಸಕರೊಬ್ಬರ ಮನೆಗೆ ಎನ್ ಐಎ ದಾಳಿ ನಡೆದಿದೆ.
ನಗರಕ್ಕೆ ಸಮೀಪದ ಉಳ್ಳಾಲದ ಮಾಜಿ ಶಾಸಕ ಬಿ.ಎಂ.ಇದಿನಬ್ಬ ಅವರ ಪುತ್ರ ರಿಯಲ್ ಎಸ್ಟೇಟ್ ಉದ್ಯಮಿ ಬಿ.ಎಂ.ಬಾಷಾ ಅವರ ಮನೆಗೆ ದಾಳಿ ನಡೆದಿದ್ದು, ತನಿಖೆ ಆರಂಭಗೊಂಡಿದೆ.
ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆಯ ಕುರಿತು ನಂಟು ಇರುವ ಶಂಕೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.
ಸುಮಾರು 25 ಮಂದಿಯನ್ನು ಒಳಗೊಂಡ ಅಧಿಕಾರಿಗಳ ತಂಡ ನಾಲ್ಕು ಕಾರುಗಳಲ್ಲಿ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿದೆ. ಎನ್‌ಐಎ ಜೊತೆಗೆ ಮಂಗಳೂರಿನ ಸ್ಥಳೀಯ ಪೊಲೀಸರು ಕೂಡ ಪಾಲ್ಗೊಂಡಿದ್ದಾರೆ.
ಎನ್‌ಐಎ ವಿಭಾಗದ ಡಿಐಜಿ ಶ್ರೇಣಿಯ ಅಧಿಕಾರಿ ಉಮಾ ಎಂಬವರ ನೇತೃತ್ವದಲ್ಲಿ ದಾಳಿ ನಡೆದಿದೆ. ಹತ್ತು ವರ್ಷಗಳ ಹಿಂದೆ ಇದಿನಬ್ಬ ಅವರ ಪುತ್ರಿಯೊಬ್ಬಳು ಕೇರಳದಿಂದ ನಾಪತ್ತೆಯಾಗಿದ್ದು ಐಸಿಸ್ ಸಂಘಟನೆ ಸೇರಿದ್ದಾಗಿ ಹೇಳಲಾಗಿತ್ತು.
ಬಾಷಾ ಕುಟುಂಬದವರು ಐಸಿಸ್ ಸಂಬಂಧಿಸಿದ ಯೂಟ್ಯೂಬ್ ಚಾನೆಲ್ ಗಳನ್ನು ಸಬ್ ಸ್ಕ್ರೈಬ್ ಮಾಡಿ,ಅದನ್ನು ಅನುಸರಿಸಿದ್ದರು ಎನ್ನಲಾಗಿದೆ. ಅಲ್ಲದೆ, ಐಸಿಸ್ ಸಂಪರ್ಕ ಮತ್ತು ಜಮ್ಮು ಕಾಶ್ಮೀರದ ಉಗ್ರ ಸಂಘಟನೆಯ ಯುವಕರ ಜೊತೆ ಮೊಬೈಲ್ ಸಂಪರ್ಕ ಇರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss