ದಾವೂದ್‌ ಇಬ್ರಾಹಿಂ ಗ್ಯಾಂಗ್‌ ಮೇಲೆ ಕಣ್ಣಿಟ್ಟ ಎನ್‌ಐಎ, 12 ಕಡೆ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹಚರರು ಮತ್ತು ಕೆಲ ಹವಾಲಾ ಆಪರೇಟರ್‌ಗಳ ಮನೆ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ದಾಳಿ ನಡೆಸಿದೆ. ಬೆಳ್ಳಂಬೆಳಗ್ಗೆ ಮುಂಬೈನಲ್ಲಿರುವ 12ಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್‌ಐಎ ಬೇಟೆ ಶುರು ಮಾಡಿದೆ. ನಾಗ್ಪಾಡಾ, ಗೋರೆಗಾಂವ್, ಬೋರಿವಲಿ, ಸಾಂತಾಕ್ರೂಜ್, ಮುಂಬ್ರಾ, ಭೆಂಡಿ ಬಜಾರ್ ಮತ್ತು ಇತರ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕೆಲ ಹವಾಲಾ ಆಪರೇಟರ್‌ಗಳು ಮತ್ತು ಡ್ರಗ್ ಪೆಡ್ಲರ್‌ಗಳು ದಾವೂದ್‌ನೊಂದಿಗೆ ಸಂಬಂಧ ಹೊಂದಿರುವುದಾಗಿ ಫೆಬ್ರವರಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಮಾಹಿತಿ ಲಭ್ಯವಾಗಿತ್ತು. ಅದರ ಆಧಾರದ ಮೇಲೆ ಇಂದು 12ಕ್ಕೂ ಹೆಚ್ಚು ಕಡೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!