ಕಣಿವೆ ರಾಜ್ಯದಲ್ಲಿ ಎನ್‌ಐಎ ಕಣ್ಣು: 10ಕ್ಕೂ ಅಧಿಕ ಸ್ಥಳಗಳಿಗೆ ದಿಢೀರ್ ದಾಳಿ, ತೀವ್ರ ಶೋಧ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಿಷೇಧಿತ ಜಮಾತ್ ಎ ಇಸ್ಲಾಮಿ ಸಂಘಟನೆಯ ಉಗ್ರ ಚಟುವಟಿಕೆಗೆ ಹಣಕಾಸು ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಕಣಿವೆ ರಾಜ್ಯ ಜಮ್ಮು ಕಾಶ್ಮೀರದ 10 ಕ್ಕೂ ಅಧಿಕ ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ದಳ ಮಿಂಚಿನ ಶೋಧ ಕಾರ್ಯಾಚರಣೆ ನಡೆಸಿದೆ.

ಶ್ರೀನಗರ, ಜಮ್ಮು, ಬುದ್ಗಾಂ, ಕುಲ್ಗಾಂ ಮತ್ತು ಅನಂತ್‌ನಾಗ್ ಸಹಿತ ವಿವಿಧ ಕಡೆಗಳಿಗೆ ದಾಳಿ ನಡೆಸಿರುವ ಅಧಿಕಾರಿಗಳು ಉಗ್ರ ಸಂಘಟನೆ ಗೆ ಸಂಬಂಧಿಸಿದ ಟ್ರಸ್ಟ್‌ಗಳ ದಾಖಲೆಗಳು ಹಾಗೂ ಡಿಜಿಟಲ್ ಸಾಧನಗಳ ಸಹಿತ 20 ಲಕ್ಷ ರೂ. ನಗದು ಹಣ ವಶಕ್ಕೆ ಪಡೆದಿದ್ದಾರೆ.

ದಾಳಿಯ ಸಂದರ್ಭ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!