Wednesday, August 10, 2022

Latest Posts

ಐಎಸ್‌ಐ ಪರ ಹಣ ಸಂಗ್ರಹ ಆರೋಪ: ಚಾರ್ಜ್‌ಶೀಟ್‌ ಸಲ್ಲಿಸಿದ ಎನ್‌ಐಎ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಗೂಢಚರ್ಯೆ ಚಟುವಟಿಕೆ ನಡೆಸಲು ಪಾಕಿಸ್ತಾನ ಐಎಸ್‌ಐ ಪರ ಹಣ ಸಂಗ್ರಹಿಸಿರುವ ಆರೋಪ ಪ್ರಕರಣದ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಶುಕ್ರವಾರ ಪೂರಕ ಚಾರ್ಜ್‌ಶೀಟ್‌ ಸಲ್ಲಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುಜರಾತ್‌ನ ಗೋಧ್ರಾ ನಿವಾಸಿ ಇಮ್ರಾನ್ ಯಾಕೂಬ್ ಗೀತೇಲಿ ವಿರುದ್ಧ ಚಾರ್ಜ್‌ಶೀಟ್ ಅನ್ನು ಭಾರತೀಯ ದಂಡ ಸಂಹಿತೆ ಮತ್ತು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಆಂಧ್ರಪ್ರದೇಶದ ವಿಜಯವಾಡದ ವಿಶೇಷ ಎನ್‌ಐಎ ನ್ಯಾಯಾಲಯದಲ್ಲಿ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಭಾರತದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಐಎಸ್‌ಐ ಜೊತೆ ಪಿತೂರಿ ನಡೆಸಿದ ಸಂಬಂಧ 2019ರ ನವೆಂಬರ್‌ನಲ್ಲಿ ವಿಜಯವಾಡದಲ್ಲಿ ಐಪಿಸಿ, ಯುಎಪಿಎ ಮತ್ತು ಅಧಿಕೃತ ರಹಸ್ಯ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ರಾಷ್ಟ್ರೀಯ ತನಿಖಾ ಸಂಸ್ಥೆ ಈ ಪ್ರಕರಣವನ್ನು 2019ರ ಡಿಸೆಂಬರ್‌ನಲ್ಲಿ ಮರು ದಾಖಲಿಸಿಕೊಂಡು, ತನಿಖೆ ನಡೆಸುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಗೀತೇಲಿ ಬಟ್ಟೆ ವ್ಯಾಪಾರದ ಸೋಗಿನಲ್ಲಿ, ಭಯೋತ್ಪಾದಕ ಚಟುವಟಿಕೆಗಳಿಗಾಗಿ ಹಣ ಸಂಗ್ರಹಿಸುತ್ತಿದ್ದಈ ವೇಳೆ ಪಾಕಿಸ್ತಾನಿ ಏಜೆಂಟರೊಂದಿಗೆ ಸಂಪರ್ಕದಲ್ಲಿದ್ದು, ಪಾಕಿಸ್ತಾನಕ್ಕೆ ಭೇಟಿ ನೀಡಿದಾಗ ಏಜೆಂಟರನ್ನು ಭೇಟಿಯಾಗುತ್ತಿದ್ದ ಎಂದು ಎ‌ನ್‌ಐಎ ಅಧಿಕಾರಿಗಳು ಹೇಳಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss