ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ನಡೆದಿದ್ದ ಎನ್ಐಎ (NIA) ದಾಳಿ ಪ್ರಕರಣ ಸಂಬಂಧ ಶಂಕಿತ ಉಗ್ರ ಅಲಿ ಅಬ್ಬಾಸ್ನನ್ನು ಬೆಂಗಳೂರಿನಲ್ಲಿ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ .
ಭಯೋತ್ಪಾದನೆಗೆ ಸಂಚು ಆರೋಪದ ಹಿನ್ನೆಲೆಯಲ್ಲಿ ಎನ್ ಐಎ ಅಧಿಕಾರಿಗಳು ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ 44 ಕಡೆಗಳಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಅಬ್ಬಾಸ್ ಅಲಿಯನ್ನ ವಶಕ್ಕೆ ಪಡೆದು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದ ಅಧಿಕಾರಿಗಳು ಮತ್ತಷ್ಟು ವಿಚಾರಣೆಗಾಗಿ ಮತ್ತೆ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಬೆಂಗಳೂರು ಸೇರಿದಂತೆ ಮಹಾರಾಷ್ಟ್ರದ 44 ಸ್ಥಳಗಳಲ್ಲಿ ದಾಳಿ ನಡೆಸಿದ್ದ ಎನ್ಐಎ ಅಧಿಕಾರಿಗಳು ಐಸಿಸ್ ನೊಂದಿಗೆ ಸಂಪರ್ಕದಲ್ಲಿದ್ದ 15 ಶಂಕಿತರನ್ನ ವಶಕ್ಕೆ ಪಡೆದು , ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನ ವಶಪಡಿಸಿಕೊಂಡಿದ್ದರು.