ಎನ್‌ಐಎ- ಇಡಿ ದಾಳಿ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಪಿಎಫ್‌ಐ- ಎಸ್‌ಡಿಪಿಐ ಕಾರ್ಯಕರ್ತರು ಪೊಲೀಸರ ವಶಕ್ಕೆ

ಹೊಸ ದಿಗಂತ ವರದಿ, ಹುಬ್ಬಳ್ಳಿ:

ಪಿಎಫ್‌ಐ, ಎಸ್‌ಡಿಪಿಐ ಮೇಲೆ ಎನ್‌ಐಎ ಹಾಗೂ ಇಡಿ ದಾಳಿ ಮಾಡಿರುವುದನ್ನು ಖಂಡಿಸಿ ರಸ್ತೆಗಳಿದು ಪ್ರತಿಭಟನೆ ನಡೆಸುತ್ತಿದ್ದ ಪಿಎಫ್‌ಐ ಹಾಗೂ ಎಸ್‌ಡಿಪಿಐ ಕಾರ್ಯಕರ್ತರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, 50 ಕ್ಕೂ ಹೆಚ್ಚು ಕಾರ್ಯಕರ್ತರ ವಶಪಡಿಸಿಕೊಂಡಿದ್ದಾರೆ.

ಇಲ್ಲಿಯ ಕೌಲಪೇಟೆಯಲ್ಲಿ ಪಿಎಫ್‌ಐ, ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ಮಾಡುವ ವೇಳೆ ರಸ್ತೆ ತಡೆಯಲು ಮುಂದಾದರೂ ಈ ಸಂದರ್ಭದಲ್ಲಿ ವಾಹನ ಸವಾರರಿಗೆ ತೊಂದರೆ ಯಾಗಬಾರದು ಎಂದು ಪೊಲೀಸರು ತಡೆದರು. ಇದಕ್ಕೆ ಸ್ಪಂದಿಸದ ಕಾರ್ಯಕರ್ತರು ಬಿಜೆಪಿ ಸರ್ಕಾರ ವಿರುದ್ಧ ಘೋಷಣೆ ಕೂಗುತ್ತ ನುಕುನುಗ್ಗಲು ಮಾಡಿದರು.

ನಂತರ ಪೊಲೀಸರು ಕಾರ್ಯಕರ್ತರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು. ಇದಕ್ಕೂ ಸ್ಪಂದಿಸದ ಕಾರಣ ೫೦ ಕ್ಕೂ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಈ ಸಂದರ್ಭದಲ್ಲಿ ಹು-ಧಾ ಪೊಲೀಸ್ ಆಯುಕ್ತ ಲಾಭೂರಾಮ, ಡಿಸಿಪಿ ಕ್ರೈಂ ಗೋಪಾಲ ಬ್ಯಾಕೋಡ, ಡಿಸಿಪಿ ಸಾಹಿಲ್ ಬಾಗ್ಲಾ ಇದ್ದರು.

ನಂತರ ಮಾಧ್ಯಮದವರೊಂದಿಗೆ ಹು-ಧಾ ಪೊಲೀಸ್ ಆಯುಕ್ತ ಲಾಭೂರಾಮ ಮಾತನಾಡಿ, ಎಸ್‌ಡಿಪಿಐ ಮತ್ತು ಪಿಎಫ್‌ಐ ನ ಕೆಲವು ಯುವಕರು ಪ್ರತಿಭಟನೆ ಮಾಡವ ವೇಳೆ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಲು ಮುಂದಾದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನ ಚದುರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಲಾಗಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ ೫೦ ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನ ವಶಕ್ಕೆ ಪಡೆದಿದ್ದೇವೆ ಎಂದರು.

ನಗರದಲ್ಲಿ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ-ಧಾರವಾಡದಲ್ಲಿ ಹೆಚ್ಚುವರಿ ಪೊಲೀಸರುನ್ನು ನಿಯೋಜಿಸಿಲಾಗಿದೆ. ವಶಕ್ಕೆ ಪಡೆದ ಪ್ರತಿಭಟನಾ ಕಾರರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!