Tuesday, September 27, 2022

Latest Posts

NIA RAID | ಎನ್‌ಐಎ ದಾಳಿ ವಿರೋಧಿಸಿ ಕಾಪುವಿನಲ್ಲಿ ರಸ್ತೆ ತಡೆ

ಹೊಸದಿಗಂತ ವರದಿ ಉಡುಪಿ:

ದೇಶಾದ್ಯಂತ ಪಿಎಫ್ಐ ಹಾಗೂ ಎಸ್‌ಡಿಪಿಐ ಕಚೇರಿ ಮೇಲೆ ದಾಳಿ ನಡೆಸಿ ಪಿ.ಎಫ್.ಐ ಮುಖಂಡರ ಬಂಧನವನ್ನು ವಿರೋಧಿಸಿ ಪಿಎಫ್ಐ ಕಾರ್ಯಕರ್ತರು ಗುರುವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 66 ರ ಕಾಪುವಿನಲ್ಲಿ ರಸ್ತೆ ತಡೆ ನಡೆಸಿದರು.

ಪ್ರತಿಭಟನೆಗೆ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯದೆ ಹೆದ್ದಾರಿ ತಡೆ ನಡೆಸಿದ ಪಿಎಫ್ಐ ಜಿಲ್ಲಾಧ್ಯಕ್ಷ ಫಯಾಝ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸ್ಥಳಕ್ಕೆ ಕಾಪು ವೃತ್ತನಿರೀಕ್ಷಕ ಪೂವಯ್ಯ, ಕಾಪು ಠಾಣಾಧಿಕಾತಿ ಶ್ರೀಶೈಲ ಮುರಗೋಡ ಹಾಗು ಸಿಬ್ಬಂದಿಗಳು ಭೇಟಿ ನೀಡಿ ಪ್ರತಿಭಟನಾಕಾರರನ್ನು ತಡೆದು ವಾಪಸು ಕಳುಹಿಸಿದ್ದಾರೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!