ಭಯೋತ್ಪಾದಕರಿಗೆ ಆರ್ಥಿಕ ನೆರವು ಪ್ರಕರಣ: ಜಮ್ಮು ಮತ್ತು ಕಾಶ್ಮೀರದ ಎಂಟು ಸ್ಥಳಗಳಲ್ಲಿ ಎನ್‌ಐಎ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಎಂಟು ಸ್ಥಳಗಳಲ್ಲಿ ದಾಳಿ ನಡೆಸಿದೆ.

ಸ್ಥಳೀಯ ಪೊಲೀಸರು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್‌) ಜಂಟಿಯಾಗಿ ದಾಳಿ ನಡೆಸಿದ್ದು, ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಶೋಪಿಯಾನ್ ಮತ್ತು ಬಾರಾಮುಲ್ಲಾ ಸೇರಿದಂತೆ ಇತರ ಪ್ರದೇಶಗಳಲ್ಲಿ ಶಂಕಿತರ ನಿವಾಸಗಳು ಮತ್ತು ಇತರ ಅಡಗುತಾಣಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!