BREAKING NEWS | ಪಿಎಫ್ ಐ ಮುಖಂಡರ ಮನೆ ಮೇಲೆ ಮತ್ತೆ ಎನ್ಐಎ ಮಿಂಚಿನ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಎರಡನೇ ಹಂತದ ನಾಯಕರನ್ನು ಗುರಿಯಾಗಿಸಿಕೊಂಡು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗುರುವಾರ ಮುಂಜಾನೆ ಕೇರಳದಾದ್ಯಂತ 28 ಸ್ಥಳಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದೆ.

ಪಿಎಫ್‌ಐ ನಾಯಕರ ಸಂಘಟನೆಯನ್ನು ಬೇರೊಂದು ಹೆಸರಿನಲ್ಲಿ ಮರುಸಂಗ್ರಹಿಸುವ ಯೋಜನೆಯ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎರ್ನಾಕುಲಂನಲ್ಲಿ ನಿಷೇಧಿತ ಪಿಎಫ್‌ಐ ಮುಖಂಡರಿಗೆ ಸಂಬಂಧಿಸಿದ ಎಂಟು ಸ್ಥಳಗಳ ಮೇಲೆ ದಾಳಿ ನಡೆಸಿದ್ದರೆ, ತಿರುವನಂತಪುರಂನಲ್ಲಿ ಆರು ಕಡೆ ಶೋಧ ನಡೆಯುತ್ತಿದೆ. ಮುಂಜಾನೆ 4 ಗಂಟೆಗೆ ದಾಳಿ ನಡೆಸಿದ್ದು, ಶೋಧ ಮುಂದುವರೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!