ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳ್ಳಂಬೆಳಗ್ಗೆ ಬೆಂಗಳೂರಿನ ಆರು ಕಡೆ ಎನ್‌ಐಎ ದಾಳಿ ನಡೆದಿದೆ.
ಆರ್.ಟಿ ನಗರದಲ್ಲಿ ಐವರು ಶಂಕಿತ ಉಗ್ರರ ಬಂಧಿಸಿರುವ ಕೇಸ್‌ಗೆ ಸಂಬಂಧಿಸಿದಂತೆ ಇಂದು ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಆರ್‌ಟಿ ನಗರ ಕೇಸ್‌ನಲ್ಲಿ ಸರಣಿ ಬಾಂಬ್ ಬ್ಲಾಸ್ಟ್ ರೂವಾರಿ ನಾಸಿರ್ ಪಾತ್ರ ಇರುವುದು ದೃಢವಾಗಿತ್ತು. ಇದೀಗ ಆತ ನೀಡಿರುವ ಮಾಹಿತಿ ಆಧರಿಸಿ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಹಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.