Sunday, December 3, 2023

Latest Posts

ಮಾನವ ಕಳ್ಳಸಾಗಣೆ ಆರೋಪ: ದೇಶಾದ್ಯಂತ 10 ರಾಜ್ಯಗಳಲ್ಲಿ ಎನ್‌ಐಎ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಾನವ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೇರಿದಂತೆ 10 ರಾಜ್ಯಗಳ ವಿವಿಧ ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ದಳ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ.

ತ್ರಿಪುರಾ, ಅಸ್ಸಾಂ, ಪಶ್ಚಿಮ ಬಂಗಾಳ, ಕರ್ನಾಟಕ, ತಮಿಳುನಾಡು, ತೆಲಂಗಾಣ, ಹರಿಯಾಣ, ಪುದುಚೇರಿ, ರಾಜಸ್ಥಾನ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ಎನ್‌ಐಎ ಶೋಧ ನಡೆಸುತ್ತಿದೆ.

ರಾಜ್ಯ ಪೊಲೀಸ್ ಪಡೆಗಳ ಸಹಾಯದೊಂದಿಗೆ ಈ ಪ್ರಕರಣಗಳಿಗೆ ಸಂಬಂಧಿಸಿದ ಶಂಕಿತರ ವಸತಿ ಆವರಣ ಮತ್ತು ಇತರ ಸ್ಥಳಗಳಲ್ಲಿ ದಾಳಿಗಳು ನಡೆಯುತ್ತಿದೆ.

ಅಪರಾಧದಲ್ಲಿ ಭಾಗಿಯಾಗಿರುವ ಶಂಕಿತರ ಬಗ್ಗೆ ನಿಖರ ಮಾಹಿತಿ ಸಿಕ್ಕ ಬಳಿಕ ಎನ್‌ಐಎ ತಂಡಗಳು ಮಂಗಳವಾರದಂದು ಬೆಳ್ಳಂಬೆಳಗ್ಗೆ 10 ರಾಜ್ಯಗಳಲ್ಲಿ ದಾಳಿಗಳನ್ನು ನಡೆಸಿದೆ. ಅಂತಾರಾಷ್ಟ್ರೀಯ ಸಂಪರ್ಕ ಹೊಂದಿರುವ ಮಾನವ ಕಳ್ಳಸಾಗಣೆದಾರರ ದಂಧೆಯನ್ನು ಬಯಲಿಗೆಳೆಯಲು ಎನ್‌ಐಎ ಮುಂದಾಗಿದೆ.

ಬೆಂಗಳೂರಿನ 15 ಸ್ಥಳಗಳಲ್ಲಿ ಎನ್‌ಐಎ ದಾಳಿ:

ಬೆಂಗಳೂರಿನ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ಎನ್ ಐಎ ದಿಢೀರ್‌ ದಾಳಿ ನಡೆಸಿದೆ.
ಬೆಂಗಳೂರಿನ 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ಎನ್ಐಎ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಈಗಾಗಲೇ 8 ಜನ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಾನವ ಕಳ್ಳ ಸಾಗಾಣಿಕೆಯಲ್ಲಿ ಭಗಿಯಾಗಿರುವ ಆರೋಪದ ಮೇಲೆ 15 ಅಧಿಕಾರಿಗಳ ತಂಡದಿಂದ ಈ ದಾಳಿ ನಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!