ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸ್ ಭಯೋತ್ಪಾದಕ ಜಾಲದೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರ ಮನೆ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಂಡ ದಾಳಿ ನಡೆಸಿದೆ.
ಗುರುವಾರ ಅನ್ಸಾರ್ ನಗರ ಪ್ರದೇಶದಲ್ಲಿರುವ ಶಹನವಾಜ್ ಆಲಂ ಮನೆಯ ಮೇಲೆ ಎನ್‌ಐಎ ತಂಡ ದಾಳಿ ನಡೆಸಿ, ಲ್ಯಾಪ್‌ಟಾಪ್, ಪ್ರಿಂಟರ್ ಮತ್ತು ಭಯೋತ್ಪಾದಕ ಸಂಪರ್ಕಕ್ಕೆ ಬಳಸಲಾಗಿದ್ದ ಇತರ ಗ್ಯಾಜೆಟ್‌ಗಳನ್ನು ವಶಪಡಿಸಿಕೊಂಡಿದೆ.
ಶಂಕಿತನ ನಿವಾಸದಿಂದ ವಶಪಡಿಸಿಕೊಂಡ ಲ್ಯಾಪ್‌ಟಾಪ್ ಮತ್ತು ಇತರ ದಾಖಲೆಗಳಲ್ಲಿ ಏನಿತ್ತು ಎಂಬುದರ ಬಗ್ಗೆ ಎನ್‌ಐಎ ಅಧಿಕಾರಿಗಳು ಮಾಹಿತಿ ನೀಡಿಲ್ಲ.

