ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ವಿವಿಧೆಡೆ ಇಂದು ಬೆಳಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಏಕಾಏಕಿ ದಾಳಿ ನಡೆಸಿದೆ.
ಎನ್‌ಐಎ ಇಂದು ದೇಶದ ಹಲವು ರಾಜ್ಯಗಳಲ್ಲಿ ದಾಳಿ ಮಾಡಿದ್ದು, ಮುಂಬೈನ ವಿಕ್ರೋಲಿ ಪ್ರದೇಶದಲ್ಲಿರುವ ಆರೋಪಿ ಅಬ್ದುಲ್ ವಾಹಿದ್ ಶೇಖ್ ನಿವಾಸದಲ್ಲೂ ಶೋಧ ನಡೆಸಿದೆ. ಮುಂಬೈನ ರೈಲು ಸ್ಫೋಟ ಪ್ರಕರಣದಲ್ಲಿ ವಾಹಿದ್ ಶೇಖ್‌ಗೆ ಖುಲಾಸೆಗೊಳಿಸಲಾಗಿದ್ದು, ವಾಹಿದ್ ಶೇಖ್ ನಿಷೇಧಿತ ಪಿಎಫ್‌ಐ ಜೊತೆ ಸಂಪರ್ಕ ಹೊಂದಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲೂ ತನಿಖೆ ನಡೆಯುತ್ತಿದೆ.
ಕಾನೂನು ಬಾಹಿರ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಕಳೆದ ವರ್ಷ ಕೇಂದ್ರ ಸರ್ಕಾರವು ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು.