ಹೊಸದಿಗಂತ ಡಿಜಿಟಲ್ ಡೆಸ್ಕ್:
ನಕ್ಸಲರ ಜೊತೆ ಸಂಪರ್ಕ ಹೊಂದಿರುವ ಶಂಕೆಯ ಮೇರೆಗೆ ಆಂಧ್ರಪ್ರದೇಶ ಮತ್ತು ತೆಲಂಗಾಣದ 60ಕ್ಕೂ ಹೆಚ್ಚು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಸೋಮವಾರ ಶೋಧ ನಡೆಸಿದೆ.
ಎರಡೂ ರಾಜ್ಯಗಳಲ್ಲಿ ಶಂಕಿತ ನಕ್ಸಲರ ಅಡಗುತಾಣಗಳು ಮತ್ತು ಆವರಣಗಳಲ್ಲಿ ಇನ್ನೂ ದಾಳಿ ನಡೆಯುತ್ತಿದೆ. ಇಂದು ಬೆಳಿಗ್ಗೆಯಿಂದಲೇ ಪ್ರತ್ಯೇಕ ಎನ್‌ಐಎ ತಂಡಗಳು ರಾಜ್ಯ ಪೊಲೀಸ್ ಪಡೆಗಳೊಂದಿಗೆ ದಾಳಿ ನಡೆಸುತ್ತಿವೆ.
ತೆಲಂಗಾಣದ ಹೈದರಾಬಾದ್‌ನಲ್ಲಿ ಮತ್ತು ಆಂಧ್ರಪ್ರದೇಶದ ಗುಂಟೂರು, ನೆಲ್ಲೂರು ಮತ್ತು ತಿರುಪತಿ ಜಿಲ್ಲೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ನಕ್ಸಲ್ ಸಹಾನುಭೂತಿ ಹೊಂದಿರುವವರ ಜೊತೆ ಸಂಪರ್ಕ ಹೊಂದಿರುವ ಶಂಕಿತ ನಾಗರಿಕ ಹಕ್ಕುಗಳ ಸಹಾನುಭೂತಿ ಹೊಂದಿರುವ ಹಲವಾರು ನಾಯಕರ ಮನೆಗಳಲ್ಲಿ ಶೋಧ ನಡೆಸಲಾಗುತ್ತಿದೆ.