Saturday, December 9, 2023

Latest Posts

ಖಲಿಸ್ತಾನಿ-ದರೋಡೆಕೋರರ ನಂಟು: 6ರಾಜ್ಯಗಳ 50ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಎನ್‌ಐಎ ದಾಳಿ 

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಖಲಿಸ್ತಾನಿ-ದರೋಡೆಕೋರರ ಸಂಬಂಧದ ವಿರುದ್ಧದ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ ಪಂಜಾಬ್, ಹರಿಯಾಣ, ದೆಹಲಿ-ಎನ್‌ಸಿಆರ್, ರಾಜಸ್ಥಾನ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿತು. ಆರು ರಾಜ್ಯಗಳಾದ್ಯಂತ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ತೀವ್ರಗೊಂಡಿದೆ.

ಜೂನ್ 18 ರಂದು ಕೆನಡಾದಲ್ಲಿ ನಡೆದ ಖಲಿಸ್ತಾನಿ ಉಗ್ರಗಾಮಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಹತ್ಯೆಯಲ್ಲಿ ಭಾರತೀಯ ಏಜೆಂಟರು ಭಾಗಿಯಾಗಿದ್ದಾರೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ ನಂತರ ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಉದ್ವಿಗ್ನತೆಯ ನಡುವೆ ಈ ಬೆಳವಣಿಗೆಯಾಗಿದೆ. ಖಲಿಸ್ತಾನಿ ಮತ್ತು ದರೋಡೆಕೋರರ ನಡುವಿನ ಸಂಪರ್ಕದೊಂದಿಗೆ ಭಾರತದಲ್ಲಿ ಹವಾಲಾ ಮಾರ್ಗಗಳ ಮೂಲಕ ಶಸ್ತ್ರಾಸ್ತ್ರಗಳಿಗೆ ಧನಸಹಾಯ ಮಾಡುತ್ತಿವೆ ಎಂದು ಎನ್ಐಎ ಮೂಲಗಳು ತಿಳಿಸಿವೆ.

ಖಲಿಸ್ತಾನ್ ಭಯೋತ್ಪಾದಕರು ವಿದೇಶಿ ನೆಲದಿಂದ ಧನಸಹಾಯ, ಶಸ್ತ್ರಾಸ್ತ್ರ ಪೂರೈಕೆ ಮೂಲಕ ದೇಶವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿರುವ ಬಗ್ಗೆ ಎನ್‌ಐಎ ತನಿಖೆಯಲ್ಲಿ ಬಹಿರಂಗವಾಗಿದೆ. ಹಾಗಾಗಿ ಪಂಜಾಬ್‌ನ 30 ಪ್ರದೇಶಗಳು, ರಾಜಸ್ಥಾನ-13, ಹರಿಯಾಣ- 4, ಉತ್ತರಾಖಂಡ, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಬುಧವಾರ ದಾಳಿ ನಡೆಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!